Ticker

6/recent/ticker-posts

Ad Code

Responsive Advertisement

430 ಶಿಕ್ಷಕ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಒಪ್ಪಿಗೆ

 ಐದು ವರ್ಷಗಳ ಮುಂಚೆ ಖಾಲಿ ಆದ ಶಿಕ್ಷಕರ ಹುದ್ದೆಗಳು ಭರ್ತಿಯಾಗಲಿವೆ. 2015, ಡಿಸೆಂಬರ್ 31ರ ಅಂತ್ಯಕ್ಕೆ ನಿವೃತ್ತಿಯಾಗಿ ಅಥವಾ ಮರಣವಪ್ಪಿ ಅಥವಾ ರಾಜೀನಾಮೆ ನೀಡಿದ ಕಾರಣಕ್ಕೆ ಒಟ್ಟು 430 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಜೂನ್ ಅಥವಾ ಜುಲೈ ತಿಂಗಳಲ್ಲಿ ಈ 430 ಹುದ್ದೆಗಳ ನೇಮಕಾತಿ ಆದೇಶವನ್ನು ನೀಡಲು ಆರ್ಥಿಕ ಇಲಾಖೆ ಸಮ್ಮತಿಸಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿನ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ 173 ಬೋಧಕ ಹುದ್ದೆ ಮತ್ತು ಪ್ರೌಢ ಶಿಕ್ಷಣ ಇಲಾಖೆಯಲ್ಲಿನ 257 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಅನುಮೋದನೆ ನೀಡಿದೆ. ಅದರೆ, ಆರ್ಥಿಕ ಇಲಾಖೆಯ ಅನುಮೋದನೆಯಿಂದ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿತ್ತು. ಇದೀಗ ಆರ್ಥಿಕ ಇಲಾಖೆ ಕೂಡ ಈ ನೇಮಕಾತಿಗೆ ಒಪ್ಪಿಗೆಯ ಮುದ್ರೆ ಒತ್ತಿದೆ. ನೇಮಕಾತಿ ಪ್ರಕ್ರಿಯೆ ಸುಗಮಗೊಳಿಸುವಂತೆ ಶಿಕ್ಷಣ ಇಲಾಖೆ ಮನವಿ ಮಾಡಿಕೊಂಡಿತ್ತು. ಮುಖ್ಯಮಂತ್ರಿಗಳು ಇದಕ್ಕೆ ಸ್ಪಂದಿಸಿ ಕೂಡಲೇ ಕ್ರಮ ಕೈಗೊಂಡಿದ್ದಾರೆ. ಮುಖ್ಯಮಂತ್ರಿಗಳಿಗೆ ಈ ವೇಳೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಧನ್ಯವಾದ ಹೇಳಿದ್ದಾರೆ.

CLICK HERE FOR VARTHAJALA WEB CHANNEL

ಪೇಜಾವರ ಅಧೋಕ್ಷಜ ಮಠದ ಪರಮಪೂಜ್ಯಶ್ರೀ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀ ಪಾದಂಗಳವರ ರಾಘವೇಂದ್ರ ಸೇವಾ ಸಮಿತಿಗೆ ಭೇಟಿ





Post a Comment

0 Comments

Ad Code

Responsive Advertisement