Ticker

6/recent/ticker-posts

Ad Code

Responsive Advertisement

ತೈಲ ಬೆಲೆ ಏರಿಕೆ ಖಂಡಿಸಿ ಫೆ. 26ರಂದು ಲಾರಿ ಮುಷ್ಕರ

ಬೆಂಗಳೂರು : ತೈಲ ಬೆಲೆ ಏರಿಕೆ ಖಂಡಿಸಿ ಮಾಲೀಕರ ಸಂಘಗಳ ಒಕ್ಕೂಟ ಲಾರಿ ಮುಷ್ಕರ ನಡೆಸಲು ನಿರ್ಧರಿಸಿದೆ. ಕರ್ನಾಟಕ ರಾಜ್ಯ ಲಾರಿ ಮಾಲೀಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಷಣ್ಮುಗಪ್ಪ ಮಾಧ್ಯಮಗಳೊಂದಿಗೆ ಮಾತನಾಡಿ, ದಿನಂಪ್ರತಿ ಡೀಸೆಲ್, ಟೋಲ್, ವಿಮೆ ಹೆಚ್ಚಳದಿಂದ ಟ್ರಕ್ಕಿಂಗ್ ಉದ್ಯಮದಲ್ಲಿ ನಾವು ಹಲವಾರು ಸಮಸ್ಯೆ ಎದುರಿಸುತ್ತಿದ್ದೇವೆ. ಸ್ಕ್ರಾಪಿಂಗ್ ನೀತಿ, ಇ-ವೇ ಬಿಲ್, ಹಸಿರು ತೆರಿಗೆ ಹೆಚ್ಚಳ,  ವಾಹನಗಳ ವೆಚ್ಚ, ವಾಹನಗಳ ಬಿಡಿಭಾಗಗಳ ದರ ಹೆಚ್ಚಳ ಇತ್ಯಾದಿ ಇತ್ಯಾದಿ ಹೀಗೆ ಹಲವು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಾ ಬಂದಿದ್ದೇವೆ. 

ಸರ್ಕಾರಕ್ಕೆ ಹಲವಾರು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವೂ ಆಗಿಲ್ಲ. ನಾಳೆ ಒಂದು ದಿನ ರಾಜ್ಯಾದ್ಯಂತ ಲಾರಿ ಮುಷ್ಕರ ನಡೆಸಲು ನಿರ್ಧರಿಸಿದ್ದೇವೆ. ಮಾರ್ಚ್ 5ರಂದು ಸಭೆ ನಡೆಸಿ, ಮಾ.15ರಿಂದ ಅರ್ನಿಷ್ಟಾವ ಮುಷ್ಕರಕ್ಕೆ ಕರೆ ನೀಡಲಾಗುವುದು ಎಂದವರು ಹೇಳಿದರು.


ಕೇಂದ್ರದ ಸ್ಕ್ರ್ಯಾಪ್ ನೀತಿಗೆ ನಮ್ಮ ಸಂಪೂರ್ಣ ವಿರೋಧವಿದೆ. ನಮ್ಮ ಪ್ರಾಣ ಬೇಕಾದರೂ ಕೊಡುತ್ತೇವೆ. ನಮ್ಮ ವಾಹನಗಳನ್ನು ಸ್ಕ್ರ್ಯಾಪ್‍ಗೆ ಕೊಡುವುದಿಲ್ಲ.ಕೇಂದ್ರ ಸರ್ಕಾರ ಟಾಟಾ ಮತ್ತು ಅಶೋಕ್ ಲೈಲ್ಯಾಂಡ್ ಕಂಪನಿಗಳ ಜೊತೆ ಸೇರಿಕೊಂಡು ಇಂಥ ನೀತಿಗಳನ್ನು ತರಲು ಮುಂದಾಗಿದೆ ಎಂದು ಅವರು ಆರೋಪಿಸಿದರು.

ಬೇರೆ ರಾಜ್ಯಕ್ಕೆ ಹೋಗುವ ನಮ್ಮ ಲಾರಿಗಳು ಅಲ್ಲಿ ಡೀಸೆಲ್ ಬೆಲೆ ಕಡಿಮೆ ಇರುವುದರಿಂದ ಅಲ್ಲಿ ಡೀಸೆಲ್ ಹಾಕಿಸುತ್ತಾರೆ. ಇದರಿಂದ ನಮ್ಮ ರಾಜ್ಯಕ್ಕೆ ಸುಮಾರು 1.60 ಕೋಟಿ ರೂ. ನಷ್ಟವಾಗುತ್ತದೆ. ಹೆದ್ದಾರಿಗಳಲ್ಲಿ ಟೋಲ್ ಲೂಟಿ ನಡೆಯುತ್ತಿದೆ. ಅವಧಿ ಮುಗಿದರೂ ಸಹಾ ಟೋಲ್ ಸಂಗ್ರಹ ನಡೆಯುತ್ತಲೇ ಇದೆ. ರಾಜ್ಯದಲ್ಲಿ 11 ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ಅವ ಮುಗಿದರೂ ನಿರ್ವಹಣೆ ಹೆಸರಲ್ಲಿ ಸಂಗ್ರಹ ಮಾಡಲಾಗುತ್ತಿದೆ ಎಂದು ಷಣ್ಮುಗಪ್ಪ ಆರೋಪಿಸಿದರು.

ಬಿಜೆಪಿ ಆಡಳಿತದಲ್ಲಿರುವ ಬೇರೆ ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ತೆರಿಗೆ ಕಡಿಮೆ ಮಾಡಲಾಗಿದೆ. ಆದರೆ ಕರ್ನಾಟಕದಲ್ಲಿ ಮಾಡಿಲ್ಲ.ರಾಜ್ಯ ಸರ್ಕಾರ 4 ರೂ. ಡೀಸೆಲ್ ಬೆಲೆ ಕಡಿಮೆ ಮಾಡಬೇಕು. ಒಂದು ಕಿ.ಮೀಗೆ 26 ರೂ. ಖರ್ಚಾಗುತ್ತದೆ. ಉದ್ಯಮವನ್ನು ನಡೆಸುವುದು ಎಂದು ಪ್ರಶ್ನಿಸಿದ ಷಣ್ಮುಗಪ್ಪ, ಡೀಸೆಲ್-ಪೆಟ್ರೋಲ್‍ನ್ನು ಜಿಎಸ್‍ಟಿ ವ್ಯಾಪಿಗೆ ತರಲಿ ಎಂದರು.

26ರಂದು ಒಂದು ದಿನ ಮುಷ್ಕರ ನಡೆಸುತ್ತೇವೆ. 6 ಲಕ್ಷ ಲಾರಿಗಳು ನಿಂತಲ್ಲೆ ನಿಲ್ಲಲಿವೆ. ಡೀಸೆಲ್ ದರ ಕಡಿಮೆ ಮಾಡುವಂತೆ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸುತ್ತೇವೆ. ಮನವಿಗೆ ಸ್ಪಂದಿಸದಿದ್ದರೆ ಮಾ.5ರಂದು ಸಭೆ ನಡೆಸಿ ಮಾ.15ರಂದು ಮುಷ್ಕರ ನಡೆಸುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.



Post a Comment

0 Comments

Ad Code

Responsive Advertisement