ಬಿ.ಎಸ್.ಯಡಿಯೂರಪ್ಪನವರಿಗೆ 79ನೇ ಹುಟ್ಟುಹಬ್ಬ ಸಂಭ್ರಮ. ಬೆಳ್ಳಂಬೆಳಗ್ಗೆಯೇ ಸಿಎಂ ಬಿಎಸ್ವೈ ಡಾಲರ್ಸ್ ಕಾಲೋನಿಯಲ್ಲಿರುವ ರಾಧಾಕೃಷ್ಣ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಸಿಎಂ ಬಿ.ಎಸ್.ಯಡಿಯೂರಪ್ಪನವರ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡುವ ಮೂಲಕ ಶುಭ ಕೋರಿದ್ದಾರೆ. ಯಡಿಯೂರಪ್ಪನವರು ಅನುಭವವುಳ್ಳ ರಾಜಕಾರಣಿ. ಬಡವರು, ರೈತರ ಪರವಾಗಿ ಜೀವನ ಮುಡಿಪಾಗಿಟ್ಟವರು ಎಂದು ಪ್ರಧಾನಿ ಮೋದಿ ಆಶಿಸಿದ್ದಾರೆ.
ಮಾಜಿ ಸಿಎಂ ಎಚ್. ಡಿ.ಕುಮಾರಸ್ವಾಮಿ ಶುಭ ಹಾರೈಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ, ರಾಜಕೀಯ ಮುತ್ಸದ್ಧಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ರಾಜ್ಯದ ಜನರ, ರೈತ ಬಂಧುಗಳ, ದುರ್ಬಲರ ಆಶೋತ್ತರಗಳಿಗಾಗಿ ದುಡಿಯಲು ಭಗವಂತ ತಮಗೆ ಎಲ್ಲ ರೀತಿಯ ಶಕ್ತಿ ನೀಡಲಿ. ಆಯುರಾರೋಗ್ಯ ಕರುಣಿಸಲಿ ಎಂದು ನಾನು ಈ ಸಂದರ್ಭದಲ್ಲಿ ಆಶಿಸುತ್ತೇನೆ ಎಂದು ಟ್ವೀಟ್ ಮಾಡಿ ಆಶಿಸಿದ್ದಾರೆ.


0 Comments