Ticker

6/recent/ticker-posts

Ad Code

Responsive Advertisement

ಆಡಳಿತಗಾರರಿಂದ `ಸ್ಮಾರ್ಟ್ ಸಿಟಿ' ರಸ್ತೆ ಕಾಮಗಾರಿಗಳ ತಪಾಸಣೆ

 ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಲಿ. ವತಿಯಿಂದ ಕೈಗೆತ್ತಿಕೊಂಡಿರುವ ರಸ್ತೆ ಕಾಮಾಗಾರಿಗಳ ಪ್ರಗತಿ ಪರಿಶೀಲನೆಯನ್ನು ಆಡಳಿತಗಾರರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ನಡೆಸಿದರು. ಈ ವೇಳೆ ಸ್ಮಾರ್ಟ್ ಸಿಟಿ ಲಿ. ವ್ಯವಸ್ಥಾಪಕ ನಿರ್ದೇಶಕರು ರಾಜೇಂದ್ರ ಚೋಳನ್, ಮುಖ್ಯ ಇಂಜಿನಿಯರ್ ರಂಗನಾಥ್ ನಾಯ್ಕ್ ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಲಿ. ಅಡಿ 36 ರಸ್ತೆಗಳನ್ನು ಟೆಂಡರ್ ಶ್ಯೂರ್ ಮಾದರಿಯಲ್ಲಿ ಅಭಿವೃದ್ಧಿಗೊಳಿಸಲಾಗುತ್ತಿದೆ. ಈ ಪೈಕಿ ಈಗಾಗಲೇ ಸನ್ಮಾನ್ಯ ಮುಖ್ಯಮಂತ್ರಿಗಳು 5 ರಸ್ತೆಗಳನ್ನು ಲೋಕಾರ್ಪಣೆಗೊಳಿಸಿದ್ದು, ಶೀಘ್ರವೇ ಇನ್ನೂ 9 ರಸ್ತೆಗಳ ಲೋಕಾರ್ಪಣೆ ಮಾಡಲಾಗವುದು ಎಂದು ಆಡಳಿತಗಾರರು ರವರು ತಿಳಿಸಿದರು.

ಸ್ಮಾರ್ಟ್ ಸಿಟಿ ವತಿಯಿಂದ ಕೈಗೆತ್ತಿಕೊಂಡಿರುವ ರಾಜಭವನ ರಸ್ತೆ, ನೆಹರು ತಾರಾಲಯ ರಸ್ತೆ, ಕಂಟೋನ್ ಮೆಂಟ್ ರಸ್ತೆ, ಕ್ವೀನ್ಸ್ ರಸ್ತೆ, ಕಸ್ತೂರ್ ಬಾ ರಸ್ತೆ ಹಾಗೂ ರಾಜಾ ರಾಮ್ ಮೋಹನ್ ರಾಯ್ ರಸ್ತೆಗಳಿಗೆ ಭೇಟಿ ನೀಡಿ ಪ್ರಗತಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಆಡಳಿತಗಾರರು, ಬಾಕಿಯಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜಭವನ ರಸ್ತೆ ಮಾರ್ಗದ ಒಂದು ಭಾಗದಲ್ಲಿ ಸಂಪೂರ್ಣ ಕಾಮಗಾರಿ ಪೂರ್ಣಗೊಂಡಿದ್ದು, ಬೀದಿ ದೀಪ ಅಳವಡಿಕೆ, ಸಸಿ ನೆಡುವುದು ಹಾಗೂ ಸೈಕಲ್ ಟ್ರ್ಯಾಕ್‍ಗೆ ಬಣ್ಣ ಬಳಿಯುವ ಕಾಮಗಾರಿ ಮಾತ್ರ ಬಾಕಿಯಿದೆ. ಬಾಕಿಯಿರುವ ಕೆಲಸವನ್ನು ಕೂಡಲೆ ಪೂರ್ಣಗೊಳಿಸಲು ಸೂಚನೆ ನೀಡಿದ ಆಡಳಿತಗಾರರು, ರಾಜಭವನ ರಸ್ತೆ ಮಾರ್ಗದಲ್ಲಿ ಪಾದಚಾರಿ ಕೆಳಸೇತುವೆಯನ್ನು ಪರಿಶೀಲಿಸಿ ಯಾರು ಅದನ್ನು ಬಳಕೆ ಮಾಡದೇ ಇರುವ ಪರಿಣಾಮ ಅದನ್ನು ತೆರವುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ವೇಳೆ ಪಾದಚಾರಿ ಮಾರ್ಗದಲ್ಲಿ ಮರಗಳಲ್ಲಿ ತೂಗಾಡುತ್ತಿರುವ ಒ.ಎಫ್.ಸಿ ಕೇಬಲ್‍ಗಳನ್ನು ಕಂಡು ಅನಧಿಕೃತವಾಗಿ ಅಳವಡಿಸಿರುವ ಕೇಬಲ್‍ಗಳನ್ನು ಕೂಡಲೆ ತೆರವುಗೊಳಿಸಲು ಸೂಚನೆ ನೀಡಿದರು. 

ಆ ಬಳಿಕ ಸ್ಮಾಟ್ ಸಿಟಿ ವತಿಯಿಂದ ಪಾದಚಾರಿ ಮಾರ್ಗದಲ್ಲಿ ಮರಗಳ ಸುತ್ತಲೂ ಕಟ್ಟೆಗಳನ್ನು ನಿರ್ಮಿಸಿರುವುದು ಕಂಡುಬಂದಿದ್ದು ಇದರಿಂದ ಪಾದಚಾರಿ ಮಾರ್ಗದ ಮಟ್ಟವು ಏರುಪೇರಾಗಿ ಪಾದಚಾರಿ ಓಡಾಡಕ್ಕೆ ತೊಂದರೆಯಾಗುವುದು. ಇತರೆ ಟೆಂಡರ್ ಶ್ಯೂರ್ ರಸ್ತೆಗಳಲ್ಲಿ ಪಾದಚಾರಿ ಮಾರ್ಗದ ಮಟ್ಟ ಮತ್ತು ಮರಗಳ ಸುತ್ತಲಿನ ಮಣ್ಣಿನ ಹೊದಿಕೆಯ ಮಟ್ಟ ಏಕರೂಪದಲ್ಲಿರುವಂತೆ ಸ್ಮಾರ್ಟ್ ಸಿಟಿ ರಸ್ತೆಗಳಲ್ಲೂ ಇದೇ ಮಾದರಿಯನ್ನು ಅಳವಡಿಸಿ ಒಂದೇ ಮಾದರಿಯ ವಿನ್ಯಾಸವಿರಬೇಕು. ಪಾದಚಾರಿಗಳ ಓಡಾಟಕ್ಕೆ ತೊಂದರೆಯಾಗುವಂತಿರಬಾರದು ಎಂದು ತಿಳಿಸಿದರು.

ನೆಹರು ತಾರಾಲಯ ರಸ್ತೆಯಲ್ಲಿಯೂ ಒಂದು ಭಾಗದ ಕಾಮಗಾರಿ ಪೂರ್ಣಗೊಂಡಿದ್ದು, ಬೀದಿ ದೀಪಗಳ ಅಳವಡಿಕೆ ಕಾಮಗಾರಿ ಮಾತ್ರ ಬಾಕಿಯಿದೆ. ಮರಗಳ ಬಳಿ ವಿಶ್ರಾಂತಿ ಪಡೆಯಲು ಹಾಸನಗಳ ವ್ಯವಸ್ಥೆ ಮಾಡಲಾಗಿದೆ.

ಬಳಿಕ ಕಂಟೋನ್ಮೆಂಟ್ ರಸ್ತೆ ಹಾಗೂ ಕ್ವೀನ್ಸ್ ರಸ್ತೆ ತಪಾಸಣೆ ನಡೆಸಿದ ಆಡಳಿತಗಾರರು, ಪಾದಚಾರಿ ಮಾರ್ಗದಲ್ಲಿ ಆರ್.ಸಿ.ಸಿ ವಿದ್ಯುತ್ ಕಂಬಗಳಿರುವುದನ್ನು ಕಂಡು, ಸ್ಥಳದಲ್ಲಿಯೇ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಕರೆ ಮಾಡಿ ಪಾದಚಾರಿ ಮಾರ್ಗಗಳಲ್ಲಿರುವ ಆರ್.ಸಿ.ಸಿ ವಿದ್ಯುತ್ ಕಂಬಳನ್ನು ತೆರವುಗೊಳಿಸಲು ಅಗತ್ಯ ಕ್ರಮಕೈಗೊಳ್ಳಬೇಕು. ಈ ಸಂಬಂಧ ಸ್ಮಾರ್ಟ್ ಸಿಟಿ ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ನಡೆಸಿ ವಿದ್ಯುತ್ ತಂತಿಗಳನ್ನು ನೆಲದಡಿ ಅಳವಡಿಸಲು ಕ್ರಮವಹಿಸುವಂತೆ ತಿಳಿಸಿದರು.

ಕಸ್ತೂರ್ ಬಾ ರಸ್ತೆ ಹಾಗೂ ರಾಜಾರಾಂ ಮೋಹನ್ ರಾಯ್ ರಸ್ತೆ ತಪಾಸಣೆ ನಡೆಸಿದರು.  ರಾಜಾರಾಂ ಮೋಹನ್ ರಾಯ್ ರಸ್ತೆಯ ಪಾದಚಾರಿ ಮಾರ್ಗ ಬಹುದೇಕ ಪೂರ್ಣಗೊಂಡಿದ್ದು, ಕೂಡಲೇ ಡಾಂಬರೀಕರಣ ಮಾಡಲು ಸೂಚಿಸಿದರು. ರಾಜಾ ರಾಮ್ ಮೋಹನ್ ರಾಯ್ ರಸ್ತೆ ಪಾದಚಾರಿ ಮಾರ್ಗದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸಿರುವುದನ್ನು ಕಂಡು ಇದರಿಂದ ಪಾದಚಾರಿಗಳಿಗೆ ಅನಾನುಕೂಲವಾಗಲಿದ್ದು, ಅದನ್ನು ತೆರವುಗೊಳಿಸುವ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. 




ADVT


Post a Comment

0 Comments

Ad Code

Responsive Advertisement