Ticker

6/recent/ticker-posts

Ad Code

Responsive Advertisement

ತರಿಕೆರೆ ಕಾಂಗ್ರೆಸ್ ಕಾರ್ಯಕರ್ತ ಮಿಥುಮ್ ಮನೆಗೆ ರಕ್ಷಾ ರಾಮಯ್ಯ ಭೇಟಿ


ತರಿಕೆರೆ, ಫೆ 27: ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಚಿಕ್ಕಮಗಳೂರಿಗೆ ತೆರಳುತ್ತಿದ್ದಾಗ ಅವಘದಲ್ಲಿ ಮೃತಪಟ್ಟಿದ್ದ ತರಿಕೆರೆಯ ಯುವ ಕಾಂಗ್ರೆಸ್ ಕಾರ್ಯಕರ್ತ ಮಿಥುನ್ ಮನೆಗೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ರಕ್ಷಾ ರಾಮಯ್ಯ ಭೇಟಿ ನೀಡಿ ಸಂತ್ವಾನ ಹೇಳಿದ್ದರು.

ನೇರಲಗೆರೆ ಗ್ರಾಮದ ಮನೆಗೆ ಭೇಟಿ ನೀಡಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ  ಹೇಳಿದರು. ಬಳಿಕ ಗ್ರಾಮಸ್ಥರೊಂದಿಗೆ ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡರು.

ಸಭೆಯಲ್ಲಿ ಮಾತನಾಡಿದ ರಕ್ಷಾ ರಾಮಯ್ಯ, ಮಿಥುನ್ ಪಕ್ಷದ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರಾಗಿದ್ದು, ಮೆಸ್ಕಾಂ ಅಧಿಕಾರಿಗಳ ಅಜಾಗರೂಕತೆಯಿಂದಾಗಿ ಈ ಅಪಘಾತ ಸ0ಭವಿಸಿದೆ. ಹೀಗಾಗಿ ಮೆಸ್ಕಾಂ ಮಿಥುನ್ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

ಎಐಸಿಸಿ  ಕಾರ್ಯದರ್ಶಿ ಬಿ.ಎಂ. ಸಂದೀಪ್, ಪಕ್ಷದ ಹಿರಿಯ ಮುಖಂಡ ಡಾ|| ಕೆ. ಪಿ. ಅಂಶುಮಂತ್, ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಭವ್ಯ ಸಿಂಗ್, ಚಿಕ್ಕಮಂಗಳೂರು ಜಿಲ್ಲಾಧ್ಯಕ್ಷ ಸಂತೋಷ್, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ, ಬ್ಲಾಕ್ ಅಧ್ಯಕ್ಷರುಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.


Post a Comment

0 Comments

Ad Code

Responsive Advertisement