Ticker

6/recent/ticker-posts

Ad Code

Responsive Advertisement

ವಾದ, ಪ್ರತಿವಾದ, ತೀರ್ಪು ಕನ್ನಡದಲ್ಲೇ ವ್ಯವಹರಿಸುವಂತೆ ನಿರ್ದೇಶನ: ಮನವಿ

ರಾಜ್ಯದ ಎಲ್ಲ ಅಧೀನ ನ್ಯಾಯಾಲಯದಲ್ಲಿ ಕನ್ನಡದಲ್ಲೇ ವ್ಯವಹರಿಸುವಂತೆ ನಿರ್ದೇಶನ ನೀಡಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರು ರಾಜ್ಯ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರಿಗೆ ಮನವಿ ಸಲ್ಲಿಸಿದರು. ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ದಿನನಿತ್ಯದ ವ್ಯವಹಾರ, ವಾದ, ಪ್ರತಿವಾದ, ತೀರ್ಪು ಮೊದಲಾದವು ಗಳನ್ನು ರಾಜ್ಯ ಭಾಷೆಯಾದ ಕನ್ನಡ ದಲ್ಲೇ ಆಗಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಲ್ಲಿಸಿದ ಪತ್ರದಲ್ಲಿ ತಿಳಿಸಲಾಗಿದೆ.

ರಾಜ್ಯ ಸರ್ಕಾರದ ನಿಲುವು ಕೂಡ ಕನ್ನಡ ಅನುಷ್ಠಾನವಾಗಬೇಕೆಂಬುದಾಗಿದೆ. ಈಗಾಗಲೇ ಕೆಲವು ನ್ಯಾಯಾಲಯಗಳಲ್ಲಿ ಕನ್ನಡದಲ್ಲೇ ತೀರ್ಪು ದಾಖಲಿಸುವ ಪ್ರಯತ್ನ ನಡೆದಿದೆ. ಆದರೂ ಅಧೀನ ನ್ಯಾಯಾಲಯಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕನ್ನಡವನ್ನು ಅನುಷ್ಠಾನಗೊಳಿಸುವಂತೆ ಅಧೀನ ನ್ಯಾಯಾಲಯದ ಅಧಿಕಾರಿಗಳು ಮತ್ತು ನ್ಯಾಯಾಧೀಶರಿಗೆನಿರ್ದೇಶನ ನೀಡುವಂತೆ ಪತ್ರದಲ್ಲಿ ಕೋರಿದ್ದಾರೆ.

ಅಧೀನ ನ್ಯಾಯಾಲಯಗಳಲ್ಲಿ ಸಮಗ್ರ ಕನ್ನಡದ ಅನುಷ್ಠಾನವಾದರೆ ಕನ್ನಡದಲ್ಲೇ ತೀರ್ಪು ನೀಡಿದರೆ ನ್ಯಾಯದಾನವನ್ನು ಸುಲಭವಾಗಿ ಅರ್ಥ ಮಾಡಿಕೊಳ್ಳಲು ಸಾಧ್ಯ ವಾಗುತ್ತದೆ. ತೀರ್ಪಿನ ಸಾಧಕ- ಬಾಧಕಗಳ ಬಗ್ಗೆ ಚಿಂತಿಸಲು ಸುಲಭವಾಗುತ್ತದೆ. ನ್ಯಾಯ ವ್ಯವಸ್ಥೆಯಲ್ಲೂ ಪಾರದರ್ಶಕತೆ ತರಲು ಸಹಾಯಕವಾಗುತ್ತದೆ. ಆಂಗ್ಲ ಭಾಷೆಯಲ್ಲಿ ತೀರ್ಪು ಹೊರ ಬಿದ್ದಾಗ ಅದನ್ನು ಅರ್ಥೈಸಿಕೊಳ್ಳುವುದು ಕಷ್ಟವಾಗಲಿದೆ. ನ್ಯಾಯದಾನ ಪ್ರಕ್ರಿಯೆ ಯಾವ ರೀತಿ ನಡೆಯುತ್ತದೆ ಎಂಬುದನ್ನು ಜನ ಸಮಾನ್ಯರು ತಿಳಿದು ಕೊಳ್ಳಲು ಸಾಧ್ಯವಾಗದೇ ಹೋಗಬಹುದು ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಹೈಕೋರ್ಟ್‍ನ ರಿಜಿಸ್ಟ್ರಾರ್ ಜನರಲ್ ರಾಜೇಂದ್ರ ಬಾದಾಮಿಕರ್, ರಾಜ್ಯ ವಕೀಲರ ಪರಿಷತ್ ಅಧ್ಯಕ್ಷ ಶ್ರೀನಿವಾಸ್ ಬಾಬು ಅವರಿಗೂ ಮನವಿ ಪತ್ರ ನೀಡಲಾಯಿತು.

Post a Comment

0 Comments

Ad Code

Responsive Advertisement