ಸಾಂಸ್ಕೃತಿಕ ನಗರಿ ಮೈಸೂರಿನ ಕೆ. ಟಿ. ಸ್ಟ್ರೀಟ್‌ನಲ್ಲಿ ಎರಡು ದಿನಗಳ ಹಿಂದೆ ನಡೆದಿದ್ದ ಅಪರಿಚಿತ ಮಹಿಳೆಯ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಫೆಬ್ರುವರಿ 16ರಂದು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದಾಖಲಾಗಿತ್ತು. ಇದಾದ ಬಳಿಕ ಆರೋಪಿಗಳ ಪತ್ತೆಗಾಗಿ ನಗರ ಪೊಲೀಸರು ವಿಶೇಷ ಪತ್ತೆ ತಂಡ ರಚಿಸಿ, ಬೇರೆ ಬೇರೆ ಕಡೆಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ರಫೀಕ್ ಅಹಮ್ಮದ್ ಅಲಿಯಾಸ್ ತಲ್ಲಾ, ಮಂಜುನಾಥ ಆರ್, ಮನು ಅಲಿಯಾಸ್ ಲೇಡಿಸ್, ರೇವಣ್ಣ ಅಲಿಯಾಸ್ ರೇವ ಹಾಗೂ ಕೃಷ್ಣ ಎಂದು ಗುರುತಿಸಲಾಗಿದೆ.
ಈ ನಾಲ್ವರು ಅಂಗಡಿಯ ಮುಂಭಾಗ ಮಲಗಿದ್ದ ಅಪರಿಚಿತ ಮಹಿಳೆ ಮೇಲೆ ಅತ್ಯಾಚಾರ ಮಾಡಿ, ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಬಂಧಿತರು ಕೂಲಿ ಕೆಲಸ, ಚಿಂದಿ ಆಯುವ ಕೆಲಸ ಮಾಡುತ್ತಿದ್ದರು. ಮಹಿಳೆಯ ಚಲನವಲನ ಗಮನಿಸಿಯೇ ಈ ಕೃತ್ಯ ಎಸಗಿದ್ದಾಗಿ ಆರೋಪಿಗಳು ತನಿಖೆ ವೇಳೆ ಬಾಯ್ಬಿಟ್ಟಿದ್ದಾರೆ.

0 Comments