Ticker

6/recent/ticker-posts

Ad Code

Responsive Advertisement

ಕೋರೋನಾ: ಒಂದೇ ದಿನಕ್ಕೆ 2010 ಸೋಂಕಿತರು...!

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್​ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನಕ್ಕೆ 2000 ಸಾವಿರ ಸಕ್ರಿಯ ಪ್ರಕರಣ ದಾಖಲಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ಇಷ್ಟು ಪ್ರಮಾಣದ ಪ್ರಕರಣ ದಾಖಲಾಗಿರುವುದು ಇದೇ ಮೊದಲು. ಕಳೆದ ಡಿಸೆಂಬರ್‍ನಿಂದ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಸಾವಿರದಿಂದ ಕೆಳಗೆ ಇಳಿದಿದ್ದವು. ಆದರೆ, ಕಳೆದೊಂದು ವಾರದಿಂದ ಪ್ರಕರಣಗಳ ಏರಿಕೆ ಕಾಣುತ್ತಿದ್ದು, ಸಾವಿರದ ಗಡಿ ಮುಟ್ಟುತ್ತಿದೆ. ಇಂದು ರಾಜ್ಯದಲ್ಲಿ 2010 ಕೊರೋನಾ ಸಕ್ರಿಯ ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರಿನಲ್ಲಿ 1280 ಮಂದಿಗೆ ಸೋಂಕು ದೃಢವಾಗಿದೆ. ರಾಜ್ಯದಲ್ಲಿ ಒಟ್ಟು ಐದು ಸಾವು ಸಂಭವಿಸಿದ್ದು, ರಾಜಧಾನಿಯಲ್ಲಿಯೇ ಮೂವರು ಸಾವನ್ನಪ್ಪಿದ್ದಾರೆ. ಸದ್ಯ 15, 595 ಜನರಿಗೆ ಕೋವಿಡ್ ಚಿಕಿತ್ಸೆ ನೀಡಲಾಗುತ್ತಿದ್ದು, ಇಂದು 677 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೇ ಹಿನ್ನಲೆ ಸರ್ಕಾರ ಲಸಿಕೆ ವಿತರಣೆ ಹೆಚ್ಚಿಸಲು ಮುಂದಾಗಿದೆ. ಇದರ ಅಂಗವಾಗಿ ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆ ಮಾಡಲಾಗುವುದು. 45 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರು ಲಸಿಕೆ ಪಡೆಯಲು ನೋಂದಾಯಿಸಿಕೊಳ್ಳುವಂತೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ದೇಶದ ಜನರಲ್ಲಿ ಮನವಿ ಮಾಡಿದ್ದಾರೆ. ಅದರಂತೆ ರಾಜ್ಯದಲ್ಲಿ ಕೋವಿಡ್ ಲಸಿಕೆ ಪಡೆಯಲು ನೋಂದಾಣಿ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಮನವಿ ಮಾಡಿದ್ದಾರೆ ಕಲಬುರ್ಗಿಯಲ್ಲಿ 129 ಪ್ರಕರಣಗಳು ಕಂಡು ಬಂದರೆ, ಮೈಸೂರಿನಲ್ಲಿ 100 ಪ್ರಕರಣಗಳು ದಾಖಲಾಗಿದೆ. ಇದೇ ಎರಡೇ ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ನೂರಾರ ಗಡಿ ದಾಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿನ ಪ್ರಮಾ ಶೇ. 2. 03ರಷ್ಟಿದೆ ಎಂದು ಆರೋಗ್ಯ ಇಲಾಖೆ ಬುಲೆಟಿನ್ ತಿಳಿಸಿದೆ. ಕಳೆದ ಏಳು ದಿನಗಳಿಂದ ಸೋಂಕಿನ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಕಳೆದ ಮೂರು ತಿಂಗಳಿಗೆ ಹೋಲಿಕೆ ಮಾಡಿದರೆ ಗಣನೀಯ ಏರಿಕೆ ಕಂಡುಬಂದಿದೆ. ಕೊರೋನಾ ಪ್ರಕರಣ ಹೆಚ್ಚಾಗಿರುವ ಹಿನ್ನಲೆ ಜನರು ಎಚ್ಚರಿಕೆ ವಹಿಸಬೇಕು ಎಂದು ಸರ್ಕಾರ ತಿಳಿಸಿದೆ. ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್​ ಧಾರಣೆ ಕಡ್ಡಾಯವಾಗಿದೆ. . ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ನಿಯಂತ್ರಿಸಲು ಪ್ರತಿದಿನ 1 ಲಕ್ಷ ಕೋವಿಡ್ ಪರೀಕ್ಷೆಯ ಗುರಿ ನಿರ್ವಹಿಸಲಾಗುತ್ತಿದೆ. ಇನ್ನು ನೆರೆಯ ಕೇರಳ ಮತ್ತು ಮಹಾರಾಷ್ಟ್ರ, ಪಂಜಾಬ್, ಚಂಡೀಗಢದಲ್ಲಿ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನಲೆ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿದೆ ಲಸಿಕೆ ವಿತರಣೆ60 ವರ್ಷ ಮೇಲ್ಪಟ್ಟ ಮತ್ತು 45 ವರ್ಷ ಮೇಲ್ಪಟ್ಟ ಅನಾರೋಗ್ಯ ಪೀಡಿತರಿಗೆ ಲಸಿಕೆ ವಿತರಣೆ ಕಾರ್ಯ ನಡೆಯುತ್ತಿದೆ. ರಾಜ್ಯದಲ್ಲಿಂದು 47,811 ಜನರಿಗೆ ಲಸಿಕೆ ನೀಡಲಾಗಿದ್ದು, ಇದುವರೆಗೂ ಒಟ್ಟು 27, 58, 715 ಜನರು ಲಸಿಕೆ ಪಡೆದಿದ್ದಾರೆ.

Post a Comment

0 Comments

Ad Code

Responsive Advertisement