Ticker

6/recent/ticker-posts

Ad Code

Responsive Advertisement

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 3 ಜನ ಸಾಧಕರಿಗೆ ಕ.ಸಾ.ಪ.ದ ದತ್ತಿ ಪ್ರಶಸ್ತಿ ಪ್ರದಾನ

ಇಂದು (17-03-2021)  ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲ್ಲಿ ಶ್ರೀ ವಿಶ್ವೇಶ್ವರ ಭಟ್ ಅವರಿಗೆ ನಾಗಡಿಕೆರೆ -ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ ಪ್ರಶಸ್ತಿ, ಡಾ. ವಿಜಯಲಕ್ಷ್ಮಿ ಬಾಳೇಕುಂದ್ರಿ ಅವರಿಗೆ ಮನೋಹರಿ ಪಾರ್ಥಸಾರಥಿ ‘ಮನುಶ್ರೀ’ ದತ್ತಿ ಪ್ರಶಸ್ತಿ ಹಾಗೂ ಡಾ. ವೈ.ಕೆ. ಸಂಧ್ಯಾಶರ್ಮ ಪಂಕಜಶ್ರೀ ಸಾಹಿತ್ಯ ಪ್ರಶಸ್ತಿಯನ್ನು ಖ್ಯಾತ ಅಂಕಣ ಬರಹಗಾರರಾದ ಶ್ರೀ ಎಸ್. ಷಡಕ್ಷರಿ ಅವರು ಪ್ರದಾನ ಮಾಡಿದರು. 


ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮನು ಬಳಿಗಾರ್ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಸಮಾರಂಭವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಈ ಸಮಾರಂಭದಲ್ಲಿ ಕ.ಸಾ.ಪ. ಗೌರವ ಕಾರ್ಯದರ್ಶಿಗಳಾದ ಡಾ. ಪದ್ಮರಾಜ ದಂಡಾವತಿ, ಗೌರವ ಕೋಶಾಧ್ಯಕ್ಷರಾದ ಶ್ರೀ ಪಿ. ಮಲ್ಲಿಕಾರ್ಜುನಪ್ಪ ಅವರುಗಳು ಉಪಸ್ಥಿತರಿದ್ದರು.



Post a Comment

0 Comments

Ad Code

Responsive Advertisement