Ticker

6/recent/ticker-posts

Ad Code

Responsive Advertisement

ಮಾರ್ಚ್ 31ರವರೆಗೆ ವಿಧಾನಸೌಧ ಪ್ರವೇಶ ನಿರ್ಬಂಧ

ಬೆಂಗಳೂರು: ವಿಧಾನ ಮಂಡಲದ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 4 ರಿಂದ ಮಾರ್ಚ್ 31 ರ ವರೆಗೆ ಸಾರ್ವಜನಿಕರಿಗೆ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳ ಪ್ರವೇಶ ನಿಷೇಧಿಸಲಾಗಿದೆ.


ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದ್ದು, ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅವಶ್ಯವಾಗಿದೆ. ಸುರಕ್ಷತಾ ಕ್ರಮ ಪಾಲಿಸುವ ಹಾಗೂ ಭದ್ರತಾ ದೃಷ್ಠಿಯಿಂದ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಈ ಸಂಬಂಧ ಪೊಲೀಸ್ ಇಲಾಖೆ ಹಾಗೂ ಸಿಬ್ಬಂದಿ, ಆಡಳಿತ ಸುಧಾರಣೆ ಇಲಾಖೆ (ಕಾರ್ಯಕಾರಿ) ಸಿಬ್ಬಂದಿ ಕ್ರಮ ಕೈಗೊಳ್ಳಬೇಕೆಂದು ಸಿಬ್ಬಂದಿ ಆಡಳಿತ ಸುಧಾರಣ ಇಲಾಖೆ ಅಧೀನ ಕಾರ್ಯದರ್ಶಇ ಕೆ.ರವೀಂದ್ರ ಸುತ್ತೋಲೆ ಹೊರಡಿಸಿದ್ದಾರೆ.

ಸರ್ಕಾರದ ನಿರ್ಧಾರದ ಬೆನ್ನಲ್ಲೇ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು ಹಾಗೂ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗುತ್ತಿವೆ.

PLEASE LIKE, SHARE & SUBSCRIBE :
 ABHIJNA KASHYAP'S  YOUTUBE CHANNEL...



Post a Comment

0 Comments

Ad Code

Responsive Advertisement