Ticker

6/recent/ticker-posts

Ad Code

Responsive Advertisement

ಕೊರೋನಾ ಎರಡನೇ ಅಲೆ ಸಾಧ್ಯತೆ: ಪರಿಸ್ಥಿತಿ ಎದುರಿಸಲು ಸರ್ಕಾರಿ ಆಸ್ಪತ್ರೆಗಳ ಸಿದ್ಧತೆ

ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಕೊರೋನಾ 2ನೇ ಅಲೆ ಆರಂಭವಾಗುವ ಆತಂಕ ಶುರುವಾಗಿದೆ. ಈ ನಡುವಲ್ಲೇ ಪರಿಸ್ಥಿತಿ ಎದುರಿಸಲು ಸಜ್ಜಾಗುವಂತೆ ರಾಜ್ಯ ಸರ್ಕಾರ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ. ಕೊರೋನಾ ಮೊದಲ ಅಲೆ ವೇಳೆ ಸೋಂಕಿತರಿಗೆ ಚಿಕಿತ್ಸೆ ನೀಡಲು ಪ್ರಮುಖ ಆಸ್ಪತ್ರೆಯಾಗಿದ್ದ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆ ಸೇರಿದಂತೆ ನಗರದ ಇತರೆ ಸರ್ಕಾರಿ ಆಸ್ಪತ್ರೆಗಳೂ ಪರಿಸ್ಥಿತಿ ಎದುರಿಸಲು ಸಜ್ಜಾಗುವಂತೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.


ಟ್ರಾಮಾ ಕೇರ್ ಸೆಂಟರ್'ನಲ್ಲಿ 160 ಹಾಸಿಗೆಹಳಿವೆ. ಈ ಸಂಖ್ಯೆಯನ್ನು 300ಕ್ಕೆ ಏರಿಕೆ ಮಾಡಲಾಗುತ್ತದೆ ಎಂದು ಎಂದು ಬಿಎಂಸಿಆರ್'ಐ ನಿರ್ದೇಶಕ ಡಾ.ಸಿ.ಆರ್.ಜಯಂತ್ ಅವರು ಹೇಳಿದ್ದಾರೆ. ಕೊರೋನಾ ಸೋಂಕಿತರ ಜೊತೆ ಜೊತೆಗೆ ಸೋಂಕು ಇಲ್ಲದೆ ಇತರೆ ರೋಗಗಳಿಂದ ಬಳಲುತ್ತಿರುವವರಿಗು ಹಾಸಿಗೆಗಳನ್ನು ಮೀಸಲಿಡಬೇಕಿದೆ. ಆಸ್ಪತ್ರೆ ಮೇಲೆ ಒತ್ತಡ ಹೆಚ್ಚಾಗಲಿದ್ದು, ಇದಕ್ಕಾಗಿ ಹೆಚ್ಚೆಚ್ಚು ವೈದ್ಯರು, ಆರೋಗ್ಯ ಕಾರ್ತಕರ್ತರನ್ನು ನೇಮಕ ಮಾಡಿಕೊಳ್ಳುವಂತೆಯೂ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದೇವೆಂದು ತಿಳಿಸಿದ್ದಾರೆ.


ಈ ನಡುವೆ ಇತರೆ ಆಸ್ಪತ್ರೆಗಳೂ ಕೂಡ ಸಿಬ್ಬಂದಿಗಳನ್ನು ನೇಮಕ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತಿವೆ. ಕೆಲವು ಆಸ್ಪತ್ರೆಗಳಲ್ಲಿ ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಲ್ಲಿಯೇ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲಾಗಿತ್ತು. ಆದರೆ, ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದ ಹಿನ್ನೆಲೆಯಲ್ಲಿ ನೇಮಕಾತಿ ಕೈಬಿಡಲಾಗಿತ್ತು.

ಈ ನಡುವೆ ಸಿವಿ ರಾಮನ್ ಜನರಲ್ ಆಸ್ಪತ್ರೆಯಲ್ಲಿ 100-250 ಹಾಸಿಗೆಗಳನ್ನು ಕೊರೋನಾ ಸೋಂಕಿತರಿಗೆ ಮೀಸಲಿಡುವಂತೆ ಸರ್ಕಾರ ಸೂಚನೆ ನೀಡಿದ್ದು, ಪ್ರಕರಣ ಏರಿಕೆಯಾಗಿದ್ದೇ ಆದರೆ, ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸಾ ಸೇವೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಹೆಚ್.ಡಿ.ಆರ್.ರಾಧಾಕೃಷ್ಣನ್ ಅವರು ಹೇಳಿದ್ದಾರೆ.

ಬೇಡಿಕೆಗಳಿಗೆ ಅನುಗುಣವಾಗಿ ಹಾಸಿಕೆಗಳನ್ನು ಮೀಸಲಿಡಲಾಗುತ್ತದೆ. ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾದಂತೆ ಕೋವಿಡೇತರ ಸೇವೆಗಳ ಹಾಸಿಗೆಗಳ ಸಂಖ್ಯೆ ಕಡಿಮೆಯಾಗಲಿದೆ. ಈ ಹಿಂದೆ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡು ಮರಳಿ ಕಳುಹಿಸಲಾಗಿದ್ದ ಸಿಬ್ಬಂದಿಗಳನ್ನು ಮತ್ತೆ ನೇಮಕ ಮಾಡಿಕೊಳ್ಳುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮಲ್ಲೇಶ್ವರಂ ಕೆಸಿ ಜನರಲ್ ಆಸ್ಪೆಯಲ್ಲಿ ಐಸಿಯುವಿನ 6 ಹಾಸಿಗೆಗಳು ಸೇರಿದಂತೆ 160 ಹಾಸಿಗೆಗಳು ಸೋಂಕಿತರಿಗೆ ಚಿಕಿತ್ಸೆ ನೀಡಲು ಬಳಕೆ ಮಾಡಲಾಗುತ್ತಿದೆ. ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ 70 ಹಾಸಿಗೆಗಳಲ್ಲಿ ಆಕ್ಸಿಜನ್ ಸೌಲಭ್ಯ ನೀಡಲಾಗಿದೆ. ಐಸಿಯು ಹಾಸಿಗೆಗಳ ಸಂಖ್ಯೆಯನ್ನು 50ಕ್ಕೆ ಏರಿಕೆಯ ಮಾಡಲಾಗಿದೆ. ಕೊರೋನಾ 2ನೇ ಅಲೆ ಎದುರಿಸಲು ಸಜ್ಜಾಗುತ್ತಿದ್ದೇವೆಂದು ಡಾ.ಬಿ.ಆರ್.ವೆಂಕಟೇಶಯ್ಯ ಅವರು ಹೇಳಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ತ್ರಿಲೋಕ್ ಚಂದ್ರ ಅವರು ಮಾತನಾಡಿ, ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಹಾಸಿಗೆಗಳನ್ನು ಕೊರೋನಾ ಸೋಂಕಿತರಿಗೆ ಮೀಸಲಿಡುವಂತೆ ಈ ಹಿಂದೆ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ಮತ್ತೆ ಹೊರಡಿಸಲಿದೆ. ಈಗಾಗಲೇ ಕೆ.ಆರ್.ಪುರಂ. ದೇವನಹಳ್ಳಿ, ಹೊಸಕೇಟೆ ಸೇರಿದಂತೆ ನಗರ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೂ ಸಜ್ಜುಗೊಳ್ಳುವಂತೆ ಸೂಚನೆ ನೀಡಲಾಗಿದೆ. ಕಳೆದ ವರ್ಷ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಆರೋಗ್ಯ ಸಿಬ್ಬಂದಿಗಳ ಕಾರ್ಯ ಮುಂದುವರೆಯಲಿದೆ. ಪರಿಸ್ಥಿತಿ ಎದುರಿಸಲು ಜಿಲ್ಲಾ ಆಸ್ಪತ್ರೆಗಳಲ್ಲೂ ಸಿದ್ಧತೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.


Post a Comment

0 Comments

Ad Code

Responsive Advertisement