Ticker

6/recent/ticker-posts

Ad Code

Responsive Advertisement

ಗೀತಾ ಶಿವರಾಜ್ ಕುಮಾರ್ ಪಕ್ಷ ಸೇರುವ ಬಗ್ಗೆ ಕಾದು ನೋಡಿ: ಡಿ.ಕೆ. ಶಿವಕುಮಾರ್

ಬೆಂಗಳೂರು:’ಗೀತಾ ಶಿವರಾಜ್ ಕುಮಾರ್ ಅವರು ಕಾಂಗ್ರೆಸ್ ಸೇರುವ ಬಗ್ಗೆ ಕಾದು ನೋಡಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.


ಸದಾಶಿವನಗರದ ತಮ್ಮ ನಿವಾಸದಲ್ಲಿ ಸೋಮವಾರ ನಟ ಶಿವರಾಜ್ ಕುಮಾರ್ ಅವರ ಜತೆ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಶಿವರಾಜ್ ಕುಮಾರ್ ಅವರು ನಮ್ಮ ಆತ್ಮೀಯರು. ಅವರ ಕುಟುಂಬ ಇಡೀ ದೇಶ ಹಾಗೂ ರಾಜ್ಯದ ಆಸ್ತಿ. ಆ ಕುಟುಂಬದ ಮೇಲೆ ನಮಗೆ ಅಪಾರ ಗೌರವವಿದೆ. ನಮಗೂ ಅವರ ಜತೆ ವೈಯಕ್ತಿಕ ಸಂಬಂಧಗಳಿವೆ. ನಾನು ಆ ಬಗ್ಗೆ ಹೆಚ್ಚು ಹೇಳುವುದಿಲ್ಲ. ಮಧು ಬಂಗಾರಪ್ಪ ಅವರಿಗೆ ಆ ಬಗ್ಗೆ ಮಾತನಾಡುವ ಹಕ್ಕಿದೆ. ಅವರು ಮಾತನಾಡಿದ್ದಾರೆ. ಸಂದರ್ಭ ಬಂದಾಗ ಗೀತಾ ಶಿವರಾಜ್ ಕುಮಾರ್ ಅವರೇ ಮಾತನಾಡುತ್ತಾರೆ’ ಎಂದರು.

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಉತ್ತರಿಸಿದ ಅವರು, ‘ಸದನದಲ್ಲಿ ನಮ್ಮ ಶಾಸಕಾಂಗ ಪಕ್ಷದ ನಾಯಕರು ಬಜೆಟ್ ಬಗ್ಗೆ ಮಾತನಾಡಲಿದ್ದಾರೆ. ನಂತರ ಸಂಜೆ ನಾವು ಹಿರಿಯ ನಾಯಕರ ಜತೆ ಚರ್ಚೆ ಮಾಡುತ್ತೇವೆ. ಆನಂತರ ಸಿಡಿ ವಿಚಾರವಾಗಿ ಪ್ರತಿಕ್ರಿಯೆ ನೀಡುತ್ತೇನೆ’ ಎಂದರು.



Post a Comment

0 Comments

Ad Code

Responsive Advertisement