Ticker

6/recent/ticker-posts

Ad Code

Responsive Advertisement

'ಬಾಂಬೆ ತಂಡ'ದ ಕ್ಷೇತ್ರಗಳು ಭೂಲೋಕದ ಸ್ವರ್ಗಗಳಾಗಿವೆಯೇ

ಬೆಂಗಳೂರು: ಮಸ್ಕಿ ಕ್ಷೇತ್ರ ಅಭಿವೃದ್ಧಿಗೆ ಚುನಾವಣೆಯೇ ಬೇಕಿತ್ತಾ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಮಸ್ಕಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡುವುದಾಗಿ ಬಿ.ಎಸ್. ಯಡಿಯೂರಪ್ಪ ಇತ್ತೀಚೆಗೆ ಪ್ರಚಾರ ಸಭೆಯಲ್ಲಿ ಹೇಳಿರುವುದು ಗಮನಕ್ಕೆ ಬಂದಿದೆ. "ಮಸ್ಕಿಯಲ್ಲಿ ಶಾಸಕರಾಗಿದ್ದವರ ಮಹಾತ್ಯಾಗದಿಂದ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಧಿಕಾರ ದೊರೆತು 2 ವರ್ಷಗಳಾಗುತ್ತಾ ಬಂದಿವೆ. ಈವರೆಗೆ ಮಸ್ಕಿಯ ಅಭಿವೃದ್ಧಿ ಯಾಕಾಗಲಿಲ್ಲ ಕ್ಷೇತ್ರದ ಪ್ರಗತಿಗೆ ಉಪಚುನಾವಣೆ ಮುಹೂರ್ತವಾಗಿತ್ತೇ" ಎಂದು ಪ್ರಶ್ನಿಸಿದ್ದಾರೆ.
ಚುನಾವಣೆ ನಿಗದಿಯಾಗಿದ್ದರಿಂದ ಮಸ್ಕಿ ಅಭಿವೃದ್ಧಿಗೆ ಈಗ ಮುಹೂರ್ತ ಬಂದಿದೆ, ಒಪ್ಪೋಣ. ಆದರೆ, ವರ್ಷದ ಹಿಂದೆಯೇ ಚುನಾವಣೆ ನಡೆದ 'ಬಾಂಬೆ ತಂಡ'ದ ಸದಸ್ಯರ ಕ್ಷೇತ್ರಗಳ ಅಭಿವೃದ್ಧಿ ಎಷ್ಟಾಗಿದೆ ಅವೆಲ್ಲವೂ ಭೂಲೋಕದ ಸ್ವರ್ಗಗಳಾಗಿವೆಯೇ ಚುನಾವಣೆ ಸಮಯದಲ್ಲಿ ನಿಮ್ಮ ಅಭಿವೃದ್ಧಿಯ ಜಪ ಬೂಟಾಟಿಕೆತನ ಎಂದು ವಾಗ್ದಾಳಿ ನಡೆಸಿದ್ದಾರೆ. ಇನ್ನು ಮಸ್ಕಿ ಅಥವಾ ಬೇರೆ ಯಾವುದೇ ಕ್ಷೇತ್ರವಾಗಿರಲಿ, ಅಭಿವೃದ್ಧಿಗೆ ಸರ್ಕಾರದಲ್ಲಿ ಹಣವೆಲ್ಲಿದೆ ಮುಖ್ಯಮಂತ್ರಿಗಳೇ ರಾಜ್ಯದ ತೆರಿಗೆ ಹಣ, ಜನರ ಬೆವರಿನ ಋಣ ನಿಮ್ಮ ಸರ್ಕಾರದಲ್ಲಿರುವ 'ಏಕಗವಾಕ್ಷಿ'ಗೆ ಆಪೋಷನವಾಗುತ್ತಿಲ್ಲವೇ ಚುನಾವಣಾ ಕಾಲದಲ್ಲಿ ಮುಖ್ಯಮಂತ್ರಿ ಮತ್ತು ಅವರ ಸರ್ಕಾರದ 'ಏಕಗವಾಕ್ಷಿ' ಆಡುವ ಮಾತುಗಳಿಗೆ ಜನರು ಮನ್ನಣೆ ನೀಡಬಾರದು ಎಂದು ಹೇಳಿದ್ದಾರೆ.

Post a Comment

0 Comments

Ad Code

Responsive Advertisement