ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವಿಜಯಪುರದ ಸಿಂಧಗಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಸ್ಥಳೀಯ ಮುಖಂಡರ ಜತೆ ಕ್ವೀನ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸಮಾಲೋಚನೆ ನಡೆಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಆರ್. ಹಲಗೂರ್ ಮತ್ತಿತರ ಮುಖಂಡರು ಭಾಗವಹಿಸಿದ್ದರು.

0 Comments