ಶ್ರೀ ಶ್ರೀ ಶ್ರೀ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೆರ ಸ್ವಾಮೀಜಿ
ಪಣಜಿ - ೨೦೨೧ ರ ಜುಲೈ ೩೦ ರವರೆಗೆ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲಿ ಎಲ್ಲಾ ಉತ್ಸವಗಳು, ದಿಂಡಿ(ಮೆರವಣಿಗೆ) ಉತ್ಸವ, ವಧ್ರ್ಯಂತ್ತೂತ್ಸವ, ಕಲ್ಯಾಣೋತ್ಸವ ಮತ್ತು ಸಂತರ್ಪಣೆ ರದ್ದುಗೊಳಿಸುವಂತೆ ಶ್ರೀ ಶ್ರೀ ಶ್ರೀ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೆರ ಸ್ವಾಮೀಜಿಯವರು ಆದೇಶ ಹೊರಡಿಸಿದ್ದಾರೆ. ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಉತ್ಸವವನ್ನು ರದ್ದುಪಡಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಎರಡನೇ ಹಂತದ ಕೊರೋನಾ ಸಾಂಕ್ರಾಮಿಕ ರೋಗ ಬಂದಿರುವುದರಿಂದ ಈ ಜಿಲ್ಲೆಯ ಜನರಲ್ಲಿ ಚಿಂತೆಯ ವಾತಾವರಣವು ಹರಡಿದೆ. ಸರಕಾರದ ಸೂಚನೆಯ ಮೇರೆಗೆ ಉತ್ಸವಗಳನ್ನು ರದ್ದುಪಡಿಸಲಾಗಿದೆ.
ಉಸ್ತುವಾರಿ ಮಂತ್ರಿ ಕೋಟ ಸ್ಪಷ್ಟನೆ
ಮಂಗಳೂರು : ಕೋವಿಡ್ 19 ನ್ನು ಪರಿಣಾಮ ಕಾರಿಯಾಗಿ ನಿಯಂತ್ರಿಸುವ ದೃಷ್ಟಿಯಿಂದ ದ. ಕ ಜಿಲ್ಲಾಧಿಕಾರಿಯವರು ಹೊರಡಿಸಿರುವ ಆದೇಶಕ್ಕೆ ಸಾರ್ವಜನಿಕರು ಆತಂಕ ವ್ಯಕ್ತ ಪಡಿಸಿದ್ದು, ಮರು ಸ್ಪಷ್ಟನೆ ನೀಡಲು ಜಿಲಾಧಿಕಾರಿಯವರಿಗೆ ಸೂಚನೆ ಕೊಟ್ಟಿರುವುದಾಗಿ ದ. ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿದ್ದಾರೆ.
ಜಿಲ್ಲೆಯಲ್ಲಿ ಯಕ್ಷಗಾನ, ಕೋಲಾ, ನೇಮ, ಪೂಜೆ, ಜಾತ್ರೆ ಮತ್ತು ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳು ಕೋವಿಡ್ 19 ನಿಯಮಪಾಲನೆಯೊಂದಿಗೆ ನಡೆಸಬಹುದಾಗಿದೆ ಎಂದು ದ. ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿದ್ದಾರೆ.
ಬಯಲು ಮೈದಾನ ಪ್ರದೇಶಗಳಲ್ಲಿ ಗರಿಷ್ಟ 500 ಕ್ಕಿಂತ ಜಾಸ್ತಿ ಜನ ಸೇರುವಂತಿಲ್ಲ ಕಡ್ಡಾಯವಾಗಿ ಮಾಸ್ಕ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸಾರ್ವಜನಿಕರ ಜವಾಬ್ದಾರಿಯಾಗಿದೆ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ.

0 Comments