Ticker

6/recent/ticker-posts

Ad Code

Responsive Advertisement

ಸಂಚಾರಿ ಪೊಲೀಸರು ಅಡ್ಡ ಹಾಕಿ ದಾಖಲೆ ಕೇಳುವ ಹಾಗಿಲ್ಲ...!

ಬೆಂಗಳೂರು, ಮಾರ್ಚ್ 5: ಟ್ರಾಫಿಕ್ ಪೊಲೀಸರ ಭಯದಲ್ಲಿಯೇ ಓಡಾಡುವ ವಾಹನ ಸವಾರರಿಗೆ ರಾಜ್ಯ ಸರ್ಕಾರ ನೆಮ್ಮದಿಯ ಸುದ್ದಿ ನೀಡಿದೆ. ಸಂಚಾರ ನಿಯಮ ಉಲ್ಲಂಘನೆ ಸಂಬಂಧ ಪೊಲೀಸರು ವಾಹನಗಳಿಗೆ ಏಕಾಏಕಿ ಅಡ್ಡ ಬಂದು ದಾಖಲೆಗಳನ್ನು ಕೇಳುವಂತಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಪರಿಷತ್‍ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಎಚ್‍ಎಂ ರಮೇಶ್ ಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ಬಿಬಿಎಂಪಿ ವ್ಯಾಪ್ತಿಯಲ್ಲಿನ ಪೊಲೀಸ್ ಠಾಣೆಗಳ ವ್ಯಾಪ್ತಿಯನ್ನು ಶೀಘ್ರದಲ್ಲಿಯೇ ಮರು ರಚನೆ ಮಾಡಲಾಗುವುದು ಎಂದಿದ್ದಾರೆ. 

ಈ ಸಂಬಂಧ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ಶೀಘ್ರದಲ್ಲಿಯೇ ಸಮಿತಿಯು ಈ ಕುರಿತು ವರದಿ ನೀಡಲಿದೆ' ಎಂದು ಮಾಹಿತಿ ನೀಡಿದ್ದಾರೆ.

ಸಿಸಿಟಿವಿ ಕ್ಯಾಮೆರಾ ಇಲ್ಲದ ಕಡೆಗಳಲ್ಲಿ ಸಿಗ್ನಲ್ ಜಂಪ್, ಅತಿ ವೇಗದ ವಾಹನಗಳನ್ನು ಪತ್ತೆಹಚ್ಚಲು ತಂತ್ರಜ್ಞಾನ ಬಳಸಿಕೊಳ್ಳಲಾಗುತ್ತಿದೆ. ನಿಯಮ ಉಲ್ಲಂಘಿಸಿದ ಸಂದರ್ಭಗಳಲ್ಲಿ ವಾಹನ ಮತ್ತು ಸವಾರರನ್ನು ಹಿಡಿಯಲು ಪೊಲೀಸರು ರಸ್ತೆಯಲ್ಲಿ ಅಡ್ಡ ಬರುವುದು ಗಮನಕ್ಕೆ ಬಂದಿದೆ. ಅಂತಹ ಸಂದರ್ಭಗಳಲ್ಲಿ ಅಪಘಾತ ಉಂಟಾಗದಂತೆ, ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿಯಮಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಂಚಾರ ವಿಭಾಗಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರದಲ್ಲಿ ಪೂರ್ವ, ಪಶ್ಚಿಮ ಮತ್ತು ಉತ್ತರ ವಲಯ ಇದೆ. ಅದಕ್ಕೆ ಹೊಸದಾಗಿ ದಕ್ಷಿಣ ವಲಯ ಅಥವಾ ನಾಲ್ಕನೆಯ ವಲಯ ರಚಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

CLICK HERE - FOR - VARTHAJALA YOUTUBE CHANNEL


ವಾರ್ತಾಜಾಲ VARTHAJALA

# 396, OOLIGA COMPLEX, SAMPIGE ROAD, MALLESWARAM, OPPOSITE ASHA SWEETS, BENGALURU 560 003. 
Phone : 080-23319247
editorvarthajala@gmail.com  |   www.varthajala.live. |


Post a Comment

0 Comments

Ad Code

Responsive Advertisement