Ticker

6/recent/ticker-posts

Ad Code

Responsive Advertisement

ಚಿನ್ನದ ಬೆಲೆ ಭಾರೀ ಕುಸಿತ; ಬೆಳ್ಳಿ ದರವೂ ಇಳಿಕೆ

ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ 47,000 ರೂ. ದಾಟಿದೆ.


ಭಾರತದಲ್ಲಿ ಬೆಳ್ಳಿ ಬೆಲೆ ಮತ್ತೆ ಭಾರೀ ಇಳಿಕೆಯಾಗಿದ್ದು, ನಿನ್ನೆ 65,400 ರೂ. ಇದ್ದ ಬೆಳ್ಳಿ ಬೆಲೆ ಇಂದು 1 ಕೆಜಿಗೆ 64,900 ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 65,700 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 69,000 ರೂ. ದಾಟಿದೆ.

ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.

ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 45,830 ರೂ. ಇದ್ದುದು ಇಂದು 45,480 ರೂ. ಆಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 42,010 ರೂ. ಇದ್ದುದು ಇಂದು 41,690 ರೂ. ಆಗಿದೆ. ಬೆಳ್ಳಿ ಬೆಲೆಯಲ್ಲಿ ಭಾರೀ ಕುಸಿತವಾಗಿದ್ದು, ನಿನ್ನೆ 65,400 ರೂ. ಇದ್ದ ಬೆಳ್ಳಿ ಬೆಲೆ ಇಂದು 64,900ಕ್ಕೆ ಕುಸಿದಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಕೊಂಚ ಕಡಿಮೆಯಾಗಿದ್ದು, 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 43,910 ರೂ. ಇದ್ದುದು 43,750 ರೂ.ಗೆ ಕುಸಿದಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 44,920 ರೂ. ಇದ್ದುದು ಇಂದು 44,750 ರೂ. ಆಗಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 45,480 ರೂ. ಆಗಿದೆ. ಹಾಗೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 41,690 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ.

Post a Comment

0 Comments

Ad Code

Responsive Advertisement