Ticker

6/recent/ticker-posts

Ad Code

Responsive Advertisement

ದೇವೇಗೌಡರು ಶೀಘ್ರ ಗುಣಮುಖರಾಗುವಂತೆ ಪ್ರಾರ್ಥನೆ

ಕೊರೊನಾ ಸೋಂಕು ದೃಢಪಟ್ಟಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಅವರ ಧರ್ಮಪತ್ನಿ ಚನ್ನಮ್ಮ ದೇವೇಗೌಡ ಶೀಘ್ರ ಗುಣಮುಖರಾಗಲಿ ಎಂದು ಉಪಮುಖ್ಯಮಂತ್ರಿ ಗಳಾದ ಡಾ.ಸಿ.ಎನ್.ಅಶ್ವಥ್ ನಾರಾಯಣ, ಲಕ್ಷ್ಮಣ್ ಸವದಿ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಹಲವು ಗಣ್ಯರು ಹಾರೈಸಿದ್ದಾರೆ.

ಗೌಡರಿಗೆ ಕೊರೊನ ಸೋಂಕು ದೃಢಪಟ್ಟಿರುವ ಸುದ್ದಿ ತಿಳಿದು ಆತಂಕವಾಯಿತು ಎಂದಿರುವ ಉಪಮುಖ್ಯಮಂತ್ರಿಗಳು, ದೇವೇಗೌಡರು ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ. ದೇವೇಗೌಡರು ಮತ್ತು ಚನ್ನಮ್ಮ ಅವರು ಬಹುಬೇಕ ಕೊರೊನಾ ಸೋಂಕಿನಿಂದ ಗುಣಮುಖರಾಗಲಿ ಎಂದು ಟ್ವೀಟ್ ಮಾಡಿರುವ ಅಶ್ವಥ್ ನಾರಾಯಣ ಅವರು, ನಾಡಿನ ಜನತೆಯ ಪ್ರಾರ್ಥನೆ ನಿಮ್ಮೊಂಗಿದೆ ಎಂದು ಹೇಳಿದ್ದಾರೆ.

ಸಾರ್ವಜನಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಕ್ರಿಯಾಶೀಲರಾಗಿದ್ದ ಗೌಡರು ಕೋವಿಡ್‍ನಿಂದ ಪಾರಾಗಿ ಮತ್ತೆ ಆರೋಗ್ಯಪೂರ್ಣರಾಗಿ ಚೇತರಿಸಿಕೊಳ್ಳುತ್ತೀರಿ ಎಂಬ ವಿಶ್ವಾಸವನ್ನು ಅವರು ಪ್ರಕಟಣೆಯಲ್ಲಿ ವ್ಯಕ್ತಪಡಿಸಿದ್ದಾರೆ.ತಮ್ಮ ಜೀವನವಿಡಿ ಅನೇಕ ಹೋರಾಟಗಳನ್ನು ಯಶಸ್ವಿಯಾಗಿ ಮುನ್ನಡೆಸಿ ಗೆದ್ದಿರುವ ಗೌಡರು ಕೊರೊನಾ ವಿರುದ್ಧ ಯಶಸ್ವಿಯಾಗಿ ಹೋರಾಡಿ ಗೆದ್ದು ಬರಲಿ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಟಿ.ಎ.ಶರವಣ ಹಾರೈಸಿದ್ದಾರೆ. ಆರೋಗ್ಯ ಸಚಿವ ಸುಧಾಕರ್ ಅವರು, ವೈದ್ಯರೊಂದಿಗೆ ನಿಟಕ ಸಂಪರ್ಕದಲ್ಲಿದ್ದು, ಗೌಡರ ಆರೋಗ್ಯದ ಬಗ್ಗೆ ಖುದ್ದಾಗಿ ಮಾಹಿತಿ ಪಡೆಯುವುದಾಗಿ ಹೇಳಿದ್ದು, ಶೀಘ್ರ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದ್ದಾರೆ.

Post a Comment

0 Comments

Ad Code

Responsive Advertisement