Ticker

6/recent/ticker-posts

Ad Code

Responsive Advertisement

ಮಹಾರಾಷ್ಟ್ರ: 1ರಿಂದ 8ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆಯೇ ಪಾಸ್

 ಮತ್ತೆ ಕೋವಿಡ್ 19 ಹಾಟ್‌ಸ್ಪಾಟ್ ಆಗುತ್ತಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಲು ಸರ್ಕಾರ ನಿರ್ಧರಿಸಿದೆ. ರಾಜ್ಯದಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಒಂದೆರಡು ದಿನಗಳಲ್ಲಿ ಕಠಿಣ ನಿರ್ಬಂಧಗಳನ್ನು ಘೋಷಿಸುವುದಾಗಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶುಕ್ರವಾರ ಹೇಳಿದ್ದರು. ಅಲ್ಲದೇ ಪರಿಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗದಿದ್ದಲ್ಲಿ ಲಾಕ್ ಡೌನ್ ಹೇರುವ ಎಚ್ಚರಿಕೆಯನ್ನು ನೀಡಿದ್ದರು.


ಒಂದರಿಂದ 8ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುತ್ತಿದೆ. ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸೆಕಂಡರಿ ಮತ್ತು ಪ್ರೌಢ ಶಿಕ್ಷಣ ಮಂಡಳಿ ನಿರ್ಧರಿಸಿದೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 89,129 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದೆ. 44,202 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇನ್ನು ಸಾವಿನ ಪ್ರಮಾಣದಲ್ಲಿಯೂ ಭಾರಿ ಏರಿಕೆಯಾಗಿದ್ದು, 714 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.




Post a Comment

0 Comments

Ad Code

Responsive Advertisement