ಭಾರತದಲ್ಲಿ 92 ದಿನಗಳಲ್ಲಿ 12 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.
ಭಾರತದಲ್ಲಿ ಭಾನುವಾರವೊಂದೇ ದಿನ 26 ಲಕ್ಷಕ್ಕೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ. ಈವರೆಗೂ 12,26,22,590 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಇದರ ಮಧ್ಯೆ ಮಾಸ್ಕೋ, ರಷ್ಯಾದಲ್ಲಿ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-ವಿ ಲಸಿಕೆ ವಿತರಿಸುವುದಕ್ಕೂ ಅನುಮೋದನೆ ನೀಡಲಾಗಿದೆ.ದೇಶದಲ್ಲಿ 91,28,146 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 57,08,223 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,12,33,415 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 55,10,238 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.
ನಾಲ್ಕನೇ ಹಂತದಲ್ಲಿ ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಮೇಲ್ಪಟ್ಟರಿಗೆ ಕೊರೊನಾವೈರಸ್ ಲಸಿಕೆ ನೀಡುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಆದೇಶಿಸಿದೆ. ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 4,04,74,993 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 10,81,759 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 4,55,94,522 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 38,91,294 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

0 Comments