Ticker

6/recent/ticker-posts

Ad Code

Responsive Advertisement

24 ಗಂಟೆಯಲ್ಲಿ 3,49,691 ಹೊಸ ಕೋವಿಡ್ ಪ್ರಕರಣ

ನವದೆಹಲಿ, ಏಪ್ರಿಲ್ 24: ಭಾರತದಲ್ಲಿ ಸತತ ಮೂರನೇ ದಿನವೂ 3 ಲಕ್ಷಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿವೆ.ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 3,46,786 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಒಟ್ಟು 1,66,10,481 ಕೊರೊನಾ ಸೋಂಕಿತರಿದ್ದಾರೆ, ಕಳೆದ 24 ಗಂಟೆಯಲ್ಲಿ 2624 ಮಂದಿ ಮೃತಪಟ್ಟಿದ್ದಾರೆ. ಹಾಗೆಯೇ 2,19,838 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.


ಇದುವರೆಗೆ ಒಟ್ಟು 1,38,67,997 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ, 25,52,940 ಸಕ್ರಿಯ ಪ್ರಕರಣಗಳಿವೆ, 1,89, 544 ಮಂದಿ ಮೃತಪಟ್ಟಿದ್ದಾರೆ. ಒಟ್ಟು 13,83,79,832 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ದೆಹಲಿ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಆಮ್ಲಜನಕದ ಕೊರತೆ ಉಂಟಾಗಿದೆ. ಇನ್ನುಆಮ್ಲಜನಕವನ್ನು ಒದಗಿಸುವ ಕೆಲಸವನ್ನು ಎಲ್ಲಾ ರಾಜ್ಯ ಸರ್ಕಾರಗಳೇ ನೋಡಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.


Post a Comment

0 Comments

Ad Code

Responsive Advertisement