ನವದೆಹಲಿ, ಏಪ್ರಿಲ್ 25: ಕೊರೊನಾವೈರಸ್ ಸೋಂಕಿತ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಮುಂದಿನ ಒಂದು ವಾರಗಳವರೆಗೂ ಲಾಕ್‌ಡೌನ್ ವಿಸ್ತರಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ ಕೊವಿಡ್-19 ಸೋಂಕಿನ ಹರಡುವಿಕೆ ಪ್ರಮಾಣಯಲ್ಲಿ ಯಾವುದೇ ಇಳಿಕೆ ಕಂಡು ಬಂದಿಲ್ಲ. ಕೊರೊನಾವೈರಸ್ ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮೇ 3ರ ಸೋಮವಾರ ಸಂಜೆ 5 ಗಂಟೆವರೆಗೂ ಲಾಕ್‌ಡೌನ್ ವಿಸ್ತರಿಸುವುದಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ.
ಸಾಂಕ್ರಾಮಿಕ ಪಿಡುಗು ಆರಂಭವಾದ ದಿನದಿಂದ ಈವರೆಗೂ ಅತಿಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣದಲ್ಲಿ ಏರಿಕೆಯಾಗಿದೆ. ಕಳೆದ ಗುರುವಾರ ಪಾಸಿಟಿವಿಟಿ ದರ ಶೇ.36ರಷ್ಟು ದಾಖಲಾಗಿದೆ. ದೆಹಲಿಯ ಕೆಲವು ಪ್ರದೇಶಗಳಲ್ಲಿ ಆಕ್ಸಿಜನ್ ಪೂರೈಸುವಲ್ಲಿ ಸರ್ಕಾರ ವಿಫಲವಾಗಿದ್ದು, ಇನ್ನು ಕೆಲವು ಪ್ರದೇಶಗಳಲ್ಲಿ ಆಮ್ಲಜನಕವನ್ನು ಸರಬರಾಜು ಮಾಡುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ರಾಜ್ಯದಲ್ಲಿ ಕೆಲವೇ ದಿನಗಳಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

0 Comments