Ticker

6/recent/ticker-posts

Ad Code

Responsive Advertisement

ಬೆಂಗಳೂರು ನಗರ : 6-9ನೇ‌ ತರಗತಿ ಸ್ಥಗಿತ; ಸಚಿವ ಸುರೇಶ್ ಕುಮಾರ್

ಬೆಂಗಳೂರು(ಏ.01): ಬೆಂಗಳೂರು ನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಪರಿಗಣಿಸಿ ಪ್ರಸ್ತುತ ನಡೆಯುತ್ತಿರುವ 6-9ನೇ‌ ತರಗತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ‌ ಆದೇಶದವರೆಗೆ ನಿಲ್ಲಿಸಲಾಗುತ್ತದೆ ಎಂದು ಸಚಿವ ಸುರೇಶ್‌ಕುಮಾರ್ ಹೇಳಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದ್ದು, ಈ ವಯೋಮಾನದ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ‌ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 10 ನೇ ತರಗತಿಗಳು ಎಂದಿನಂತೆ ಮುಂದುವರೆಯಲಿದ್ದು, ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಲ್ಲ ಎಂದಿದ್ದಾರೆ. 

ರಾಜ್ಯದ ಉಳಿದೆಡೆ ಪ್ರಸ್ತುತ ಇರುವ ವ್ಯವಸ್ಥೆ ಮುಂದುವರೆಯಲಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಎಂದು ಸಚಿವ ಸುರೇಶ್‌ಕುಮಾರ್  ಅವರು  


ಹೇಳಿದ್ದಾರೆ.

Post a Comment

0 Comments

Ad Code

Responsive Advertisement