ನವದೆಹಲಿ, ಏ 14 (ಯುಎನ್ಐ ) ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ತೀವ್ರವಾಗುತ್ತಿರುವ ಕಾರಣ ಮತ್ತೊಂದು ಮಹತ್ವದ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹಾಗು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ವಿವಿಧ ರಾಜ್ಯಗಳ ರಾಜ್ಯಪಾಲರೊಂದಿಗೆ ಸಂವಾದ ನಡೆಸಲಿದ್ದಾರೆ.
ಕಳೆದ ವರ್ಷ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ವಿವಿಧ ರಾಜ್ಯಪಾಲರ ಜೊತೆ ಮಾತುಕತೆ ಮಾಡಿದ್ದರು. ಇದೆ 8 ರಂದು ಪ್ರಧಾನಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿದ್ದರು. ಹಲವು ರಾಜ್ಯಗಳಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವಿವಿಧ ರಾಜ್ಯಪಾಲರೊಂದಿಗೆ ಮಹತ್ವದ ಸಭೆ ನಡೆಸಲಿದ್ದು, ಮತ್ತಷ್ಟು ಕಠಿಣ ಕ್ರಮ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ಹಿಂದೆ ಪ್ರಧಾನಿ ಮೋದಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿ, ಕೊರೊನಾ ಹೆಚ್ಚಾಗಿರುವ ರಾಜ್ಯಗಳ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡು ಅದರ ನಿಯಂತ್ರಣಕ್ಕೆ ಹಲವು ಮಹತ್ವದ ಸಲಹೆ - ಸೂಚನೆ ನೀಡಿದ್ದರು.

0 Comments