Ticker

6/recent/ticker-posts

Ad Code

Responsive Advertisement

ಕಂದಾಯ ಸಚಿವರು ಹಾಗೂ ಮುಖ್ಯ ಆಯುಕ್ತರಿಂದ ಕೋವಿಡ್ ಆರೈಕೆ ಕೇಂದ್ರಕ್ಕೆ ಚಾಲನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಾಸರಹಳ್ಳಿ ವಲಯ ವ್ಯಾಪ್ತಿಯ ಬಾಗಲಗುಂಟೆ ವಾರ್ಡ್ ಸಂಖ್ಯೆ-14 ರಲ್ಲಿ ಬರುವ ಕಾರ್ಮಿಕ ಭವನದಲ್ಲಿ ಸ್ಥಾಪಿಸಿರುವ ಕೋವಿಡ್ ಆರೈಕೆ ಕೇಂದ್ರಕ್ಕೆ ಮಾನ್ಯ ಕಂದಾಯ ಸಚಿವರು ಶ್ರೀ ಆರ್.ಅಶೋಕ್ ರವರು ಚಾಲನೆ ನೀಡಿದರು. ಈ ವೇಳೆ ದಾಸರಹಳ್ಳಿ ವಲಯ ಕೋವಿಡ್ ಉಸ್ತುವಾರಿ ಸಚಿವರು ಶ್ರೀ ಕೆ.ಗೋಪಾಲಯ್ಯ, ಸ್ಥಳೀಯ ಶಾಸಕ ಮಂಜುನಾಥ್, ಆಡಳಿತಗಾರರು ರಾಕೇಶ್ ಸಿಂಗ್, ಮುಖ್ಯ ಆಯುಕ್ತರು ಗೌರವ್ ಗುಪ್ತ, ವಲಯ ಆಯುಕ್ತರು ರವೀಂದ್ರ ಜಂಟಿ ಆಯುಕ್ತರು ನರಸಿಂಹಮೂರ್ತಿ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು. 


ಬಿಬಿಎಂಪಿ ವ್ಯಾಪ್ತಿಯಲ್ಲಿ ಈಗಾಗಲೇ 12 ಕೋವಿಡ್ ಆರೈಕೆ ಕೇಂದ್ರಗಳನ್ನು ತೆರೆಯಲಾಗಿದ್ದು, ದಾಸರಹಳ್ಳಿ ವಲಯದ ಕಾರ್ಮಿಕ ಭವನದಲ್ಲಿ ಇಂದು 127 ಹಾಸಿಗೆ ಸಾಮರ್ಥ್ಯದ ಕೋವಿಡ್ ಆರೈಕೆ ಕೇಂದ್ರವನ್ನು ತೆರೆಯಲಾಗಿದ್ದು, ಅದರಲ್ಲಿ‌ 10 ಆಕ್ಸಿಜನ್ ಹಾಸಿಗೆಗಳನ್ನು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವರು ತಿಳಿಸಿದರು.

ಕೋವಿಡ್ ಆರೈಕೆ ಕೇಂದ್ರಕ್ಕೆ ಚಾಲನೆ ನೀಡಿದ ಬಳಿಕ ಕಂದಾಯ ಸಚಿವರು ಮಾತನಾಡಿ, ಕಾರ್ಮಿಕ ಭವನದಲ್ಲಿ ಕೋವಿಡ್ ಆರೈಕೆ ಕೇಂದ್ರ ಸುಸಜ್ಜಿತವಾಗಿದ್ದು, ವೈದ್ಯರು ಹಾಗೂ ಸಿಬ್ಬಂದಿಯನ್ನು‌ ಎರಡು ಪಾಳಿಯಲ್ಲಿ ನಿಯೋಜನೆ ಮಾಡಲಾಗಿದೆ. ಒಂದು ಪಾಳಿಯಲ್ಲಿ 14 ಮಂದಿ ಕೆಲಸ ಮಾಡಲಿದ್ದಾರೆ. ಸೋಂಕಿತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಶೌಚಾಲಯ, ಸ್ನಾನದ ಕೊಠಡಿ, ಅಡುಗೆ ವ್ಯವಸ್ಥೆ, ಊಟ ಮಾಡುವ ಕೊಠಡಿ, ಮನರಂಜನಾ ಕೊಠಡಿ ಸೇರಿದಂತೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ಸೋಂಕು ದೃಢಪಟ್ಟು ಎಸಿಮ್ಟಮ್ಯಾಟಿಕ್ ಇದ್ದು ಮನೆಯಲ್ಲಿ ಉಳಿಯಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಇಲ್ಲದಿರುವವರು ಕೋವಿಡ್ ಆರೈಕೆ ಕೇಂದ್ರಗಳಿಗೆ ಬಂದು ಆರೈಕೆ ಪಡೆಯಿರಿ ಎಂದು ತಿಳಿಸಿದರು.


ನಗರದಲ್ಲಿ ಕೋವಿಡ್ ದೃಢಪಟ್ಟವರು ಮೊಬೈಲ್ ಸ್ವಿಚ್ ಆಫ್ ಮಾಡಿಕೊಳ್ಳುತ್ತಿದ್ದು, ಸೋಂಕು ದೃಢಪಟ್ಟವರು ಮೊಬೈಲ್‌ ಸ್ವಿಚ್ ಆಫ್‌ ಮಾಡಿಕೊಂಡವರ ಟ್ರಾಕಿಂಗ್ ಅನ್ನು ಪೋಲೀಸ್ ನವರು ಮಾಡುತ್ತಿದ್ದಾರೆ. ತೀರಾ ಉಸಿರಾಟದ ಸಮಸ್ಯೆ ಆದಾಗ ಆಸ್ಪತ್ರೆಗಳಲ್ಲಿ ಐಸಿಯು ಹಾಸಿಗೆ ಬೇಕೆಂದು ಬರುತ್ತಿದ್ದಾರೆ. ಮುಂಚಿತಾವಗಿಯೇ ಕೋವಿಡ್ ಪಾಸಿಟಿವ್ ಎಂದು ತಿಳಿದ ತಕ್ಷಣ ಐಸೋಲೇಟ್ ಆಗಿ ಔಷಧ, ಮಾತ್ರೆಗಳನ್ನು ಸರಿಯಾಗಿ ತೆಗೆದುಕೊಂಡಾಗ ಕೋವಿಡ್ ಸೋಂಕು ಹರಡುವುದನ್ನು ತಡೆಯಬಹುದಾಗಿದೆ. ಅಗತ್ಯಕ್ಕನುಗುಣವಾಗಿ ಇನ್ನೂ ಹೆಚ್ಚಿನ ಕೋವಿಡ್ ಆರೈಕೆ ಕೇಂದ್ರಗಳನ್ನು ತೆಗೆಯಲು ಕ್ರಮವಹಿಸಲಾಗುವುದು ಎಂದು ಹೇಳಿದರು.




 


Post a Comment

0 Comments

Ad Code

Responsive Advertisement