Ticker

6/recent/ticker-posts

Ad Code

Responsive Advertisement

ಭಾರತದಲ್ಲಿ ಒಂದೇ ದಿನ ಲಕ್ಷಕ್ಕೂ ಹೆಚ್ಚು ಪ್ರಕರಣ….!

ಎರಡನೇ ಸುತ್ತಿನಲ್ಲಿ ಮಾರಕ ಕಾಯಿಲೆ ಕೊರೋನಾ ಅಲೆ ದೇಶದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದೆ. ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿದ್ದಾರೆ. ಕಳೆದ ಏ. 4ರ ಭಾನುವಾರದಂದು ಲಕ್ಷಕ್ಕೂ ಹೆಚ್ಚು ಪ್ರಕರಣ ಕಂಡುಬಂದಿತ್ತು. ಈಗ ಮತ್ತೆ ಒಂದೇ ದಿನ ಲಕ್ಷಕ್ಕೂ ಹೆಚ್ಚು ಜನರು ಸೋಂಕು ಪೀಡಿತರಾಗಿದ್ದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.


6ನೇ ತಾರೀಖು ಮಂಗಳವಾರ 1,15,736 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಅಂಕಿ ಸಂಖ್ಯೆಗೆ ಕೇಳಿ ಜನತೆ ಆತಂಕಕ್ಕೀಡಾಗಿದ್ದಾರೆ., ಈ ಪೈಕಿ ಗುಣ ಆಗಿರುವವರು 59,856 ಜನ ಮಾತ್ರ. ಇದರಿಂದ ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರಾದವರ ಸಂಖ್ಯೆ 1,28,01,785ಕ್ಕೆ ಏರಿಕೆ ಆಗಿದೆ. ಮಂಗಳವಾರ ಒಂದೇ ದಿನ ಕೊರೋನಾಗೆ 630 ಜನರು ಬಲಿ ಆಗಿದ್ದಾರೆ. ಈವರೆಗೆ ಕೊರೋನಾ ರೋಗದಿಂದ ಸತ್ತವರ ಸಂಖ್ಯೆ 1,66,177ಕ್ಕೆ ಏರಿಕೆ ಆಗಿದೆ.

ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಸಿಕೆಗಳನ್ನು ಹಾಕುವ ಕೆಲಸವನ್ನು ಕೂಡ ಹಂತ ಹಂತವಾಗಿ ತೀವ್ರಗೊಳಿಸಲಾಗುತ್ತದೆ. ಈವರೆಗೆ ದೇಶಾದ್ಯಂತ ಒಟ್ಟು 8,70,77,474 ಜನರಿಗೆ ಲಸಿಕೆ ಹಾಕಲಾಗಿದೆ. ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಹೆಚ್ಚು ವಯಸ್ಸಾದ ಎಲ್ಲರಿಗೂ ಕೊರೋನಾ ಲಸಿಕೆ ಹಾಕಲಾಗುತ್ತಿದೆ.

ದೇಶದಲ್ಲಿ ಮೊತ್ತ ಮೊದಲ ಬಾರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 2020ರ ಜನವರಿ 30ರಂದು; ಕೇರಳದಲ್ಲಿ.

ಅದಾದ ಬಳಿಕ ಅದು ಲಕ್ಷದ ಗಡಿ ಬಳಿ ಬರಲು ಹೆಚ್ಚು ಕಡಿಮೆ ಎಂಟು ತಿಂಗಳು ಹಿಡಿದವು. ಆಗಲೂ ದಿನ ಒಂದರಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಒಂದು ಲಕ್ಷ ದಾಟಿರಲಿಲ್ಲ. 2020ರ ಸೆಪ್ಟೆಂಬರ್ 17ರಂದು 98,795 ಕೇಸ್ ಕಂಡುಬಂದಿದ್ದೇ ಈವರೆಗಿನ ದಾಖಲೆ ಆಗಿತ್ತು. ಆದರೆ, ಈಗ ಎರಡನೇ ಅಲೆ ಶುರುವಾದ ಮೇಲೆ ಇದೇ ಮೊದಲ ಬಾರಿಗೆ ಏಪ್ರಿಲ್ 4ರಂದು 1,03,558 ಹೊಸ ಪ್ರಕರಣಗಳು ಪತ್ತೆಯಾಗಿದ್ದವು. ಏಪ್ರಿಲ್ 6ರಂದು 1,15,736 ಹೊಸ ಪ್ರಕರಣಗಳು ಕಂಡುಬಂದಿವೆ.

ದೇಶದಲ್ಲಿ ದಾಖಲಾಗುತ್ತಿರುವ ಒಟ್ಟು ಕೊರೋನಾ ಪ್ರಕರಣಗಳ ಪೈಕಿ ಶೇಕಡಾ 90ರಷ್ಟು ಮಹಾರಾಷ್ಟ್ರ, ಕರ್ನಾಟಕ, ಪಂಜಾಬ್, ಕೇರಳ, ಛತ್ತೀಸ್ಗಢ, ಉತ್ತರ ಪ್ರದೇಶ, ಗುಜರಾತ್, ತಮಿಳುನಾಡು, ದೆಹಲಿ, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಕಂಡು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಈ 11 ರಾಜ್ಯಗಳ ಆರೋಗ್ಯ ಸಚಿವ ಜೊತೆ ಮಂಗಳವಾರ (ಏಪ್ರಿಲ್ 6) ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಸಭೆ ನಡೆಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಕೊರೊನಾ ನಿಯಂತ್ರಿಸಲು ಕೈಗೊಳ್ಳಬೇಕಾದ ಕಠಿಣ ಕ್ರಮಗಳ ಬಗ್ಗೆ ಚರ್ಚೆ ಆಗಿದೆ. ಅದೇ ದಿನ ದೇಶದಲ್ಲಿ ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಪತ್ತೆ ಆಗಿವೆ.


Post a Comment

0 Comments

Ad Code

Responsive Advertisement