Ticker

6/recent/ticker-posts

Ad Code

Responsive Advertisement

ಸಿಡಿ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ: ಡಿಕೆಶಿ

ಬೆಂಗಳೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸಿಡಿ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬರುತ್ತಿರುವ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಸಿಡಿ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.


ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಿಡಿ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ನನ್ನ ಹೆಸರು ಹೇಳಿದರೆ ಅವರಿಗೆ ಮಾರ್ಕೆಟಿಂಗ್ ಆಗುತ್ತದೆ. ಹೀಗಾಗಿ ಸಿಡಿ ಪ್ರಕರಣದಲ್ಲಿ ನನ್ನ ಹೆಸರು ಬಳಸಿ ಕೊಳ್ಳಲಾಗುತ್ತಿದೆ. ಸಿಡಿ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ಡಿಕೆಶಿ ಸ್ಪಷ್ಟಪಡಿಸಿದರು. ಇದೇ ವೇಳೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ಪತ್ರ ಬರೆದ ವಿಚಾರ ಕುರಿತು ಪ್ರತಿಕ್ರಿಯೆ ನೀಡಿ,  ಹಿರಿಯ ಸಚಿವರಿಗೇ ಮುಖ್ಯಮಂತ್ರಿಗಳ ಮೇಲೆ ನಂಬಿಕೆಯಿಲ್ಲ. ರೂ. 1200 ಕೋಟಿ ಅಕ್ರಮ ನಡೆದ ಬಗ್ಗೆ ಹೇಳಿದ್ದಾರೆ. ಕೂಡಲೇ ಯಡಿಯೂರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವಾದರೆ ಸಚಿವರ ರಾಜೀನಾಮೆ ಪಡೆಯಬೇಕು. ಇಂದು ಸಂಜೆಯೊಳಗೆ ಸಿಎಂ ನಿರ್ಧರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿಗಳ ವಿರುದ್ಧ ಸಚಿವರು ಸಿಡಿದೆದ್ದಿರುವ ವಿಚಾರ ಸಂಬಂಧ ಮುಂದಿನ ಹೋರಾಟ ಕುರಿತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಲಾಗುವುದು. ಚರ್ಚೆ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. 


Post a Comment

0 Comments

Ad Code

Responsive Advertisement