Ticker

6/recent/ticker-posts

Ad Code

Responsive Advertisement

ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್‌ಗೆ ಕೊರೊನಾ ಸೋಂಕು

ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್‌ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದ ಮೂರು ದಿನಗಳಿಂದ ತನ್ನ ಸಂಪರ್ಕಕ್ಕೆ ಯಾರು ಯಾರುಬಂದಿದ್ದೀರಿ ಅವರೆಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.


ಅವರೇ ಖುದ್ದಾಗಿ ಟ್ವೀಟ್ ಮಾಡಿದ್ದು, ನನಗೆ ಇಂದು ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಯಾರು ನನ್ನ ಸಂಪರ್ಕಕ್ಕೆ ಬಂದಿದ್ದೀರಿ ಅವರೆಲ್ಲರೂ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.

ಪ್ರಕಾಶ್ ಜಾವಡೇಕರ್ ಅವರು ಅವರು ಕಳೆದ ತಿಂಗಳು ಪುಣೆಯ ದೀನಾನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದರು. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,17,353 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಖಾತ್ರಿಯಾಗಿದೆ. ಒಂದು ದಿನದಲ್ಲಿ 1185 ಮಂದಿ ಕೊವಿಡ್-19 ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 1,74,308ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ 1,18,302 ಸೋಂಕಿತರು ಗುಣಮುಖರಾಗಿದ್ದು, ಈವರೆಗೂ 1,25,47,866 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಒಟ್ಟು 1,42,91,917 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಪ್ರಸ್ತುತ 15,69,743 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪತ್ತೆಗೆ ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 14,73,210 ಜನರ ಮಾದರಿಯನ್ನು ತಪಾಸಣೆಗೊಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 26,34,76,625 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

Post a Comment

0 Comments

Ad Code

Responsive Advertisement