Ticker

6/recent/ticker-posts

Ad Code

Responsive Advertisement

ವಿದ್ಯಾರ್ಥಿಗಳು ರಾಜ್ಯ, ದೇಶ, ವಿಶ್ವಮಟ್ಟದಲ್ಲಿ ಕೀರ್ತಿ ಸಂಪಾದನೆ ಮಾಡಲಿ - ಸಚಿವ ಸುಧಾಕರ್

ರಾಜ್ಯದಲ್ಲಿನ 34 ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳಿಗೆ ವೈದ್ಯಕೀಯ ಸೌಲಭ್ಯ ಒದಗಿಸುವ ಸಲುವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ  ಮತ್ತು ಕ್ರೀಡಾ ವಿಜ್ಞಾನ ಕೇಂದ್ರಗಳ ನಡುವೆ ಒಂದು  ಐತಿಹಾಸಿಕ  ಕ್ಷಣ ಎಂದು  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್  ತಿಳಿಸಿದರು.

ವಿಕಾಸಸೌಧದಲ್ಲಿ ಯವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಅಧೀನದಲ್ಲಿ ಬರುವ ಕರ್ನಾಟಕ ರಾಜ್ಯದಲ್ಲಿನ 34 ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳಿಗೆ ವೈದ್ಯಕೀಯ  ಸೌಲಭ್ಯವನ್ನು ಒದಗಿಸುವ ಸಲುವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಿಗಳ ವಿಶ್ವವಿದ್ಯಾಲಯ, ಬೆಂಗಳೂರು ಮತ್ತು ಕ್ರೀಡಾ ವಿಜ್ಞಾನ ಕೇಂದ್ರ ಇವರುಗಳ ನಡುವೆ ಮಾಡಿಕೊಳ್ಳಲು ಉದ್ದೇಶಿಸಿರುವ ಒಪ್ಪಂದಕ್ಕೆ ಸಹಿ ಮಾಡುವ ಕಾರ್ಯಕ್ರಮಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ  ಮಾತನಾಡಿದ ಸಚಿವರು ಕ್ರೀಡಾಪಟುಗಳ ಯಶಸ್ಸಿಗೆ ಅವರ ಆರೋಗ್ಯ ಅತ್ಯಂತ ಮುಖ್ಯವಾಗಿದ್ದು, ಈ ಒಪ್ಪಂದಿಂದ ಅವರಿಗೆ ವಿಶೇಷ ಸೌಲಭ್ಯ ದೊರೆಯಲಿದೆ ಎಂದು ಸಚಿವರು ತಿಳಿಸಿದರು.

ಕ್ರೀಡೆ ಎಂಬುದು ವ್ಯಕ್ತಿಯ ಜೀವನದಲ್ಲಿ ಮುಖ್ಯವಾಗಿದೆ. ಕ್ರೀಡೆ ಯುವ ಜನರಲ್ಲಿ ಮತ್ತು ವಿದ್ಯಾರ್ಥಿಗಲ್ಲಿ ಬಹಳ ಮುಖ್ಯವಾಗಿದೆ.   ಯುವ ಪ್ರತಿಭೆಗಳಿಗೆ ದೇಶದಲ್ಲಿ ಕೊರತೆ ಇಲ್ಲ. ಪ್ರತಿಭೆಗಳಿಗೆ ಉತ್ತೇಜನ ಮಾರ್ಗದರ್ಶನಕ್ಕೆ ವಿಶೇಷ ಪ್ರಯತ್ನ ಮಾಡಿದೆ. ಉದ್ದೇಶ ಸರಿಯಿರುವುದರಿಂದ ಫಲಿತಾಂಶ ಸರಿ ಇರುತ್ತದೆ. ವಿದ್ಯಾರ್ಥಿಗಳು ರಾಜ್ಯ, ದೇಶ, ವಿಶ್ವಮಟ್ಟದಲ್ಲಿ ಕೀರ್ತಿ ಸಂಪಾದನೆ ಮಾಡಲಿ ಎಂದು ಶುಭ ಹಾರೈಸಿದರು.
ರಾಜ್ಯದ ಕ್ರೀಡಾ ವಸತಿ ಶಾಲೆಯಲ್ಲಿ ಓದುತ್ತಿರುವ ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಹೆಚ್ಚಿನ ವೈದ್ಯಕೀಯ ಚಿಕಿತ್ಸೆ, ಆರೋಗ್ಯ ಶಿಕ್ಷಣ, ಆರೋಗ್ಯ ಮಾಹಿತಿ, ದೈಹಿಕ ಆರೋಗ್ಯ, ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಈ ಕಾರ್ಯಕ್ರಮವು ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮಗಳನ್ನು ವಿಶ್ವವಿದ್ಯಾಲಯದ ಸಂಯೋಜನೆಗೊಳಪಟ್ಟ  ವೈದ್ಯಕೀಯ ಕಾಲೇಜುಗಳ ಮೂಲಕ ಹಮ್ಮಿಕೊಳ್ಳಲಾಗುವುದು. 30 ಜಿಲ್ಲೆಗಳಲ್ಲಿರುವ 34 ಕ್ರೀಡಾ ವಸತಿ ಶಾಲೆಗಳ ನಿರ್ಮಹಣೆಯನ್ನು ವಿಶ್ವವಿದ್ಯಾಲಯದ ಸಂಯೋಜನೆಗೊಳಪಟ್ಟ 34 ಕಾಲೇಜುಗಳಿಗೆ  ನೀಡಲಾಗುವುದು ಎಂದು ತಿಳಿಸಿದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಡಾ. ಎಸ್. ಸಚ್ಚಿದಾನಂದ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಸಚಿವರು ಡಾ.ಎಸ್. ರಾಮಕೃಷ್ಣರೆಡ್ಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರಾದ ರವೀಂದ್ರ ಹಲವು ಗಣ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

Post a Comment

0 Comments

Ad Code

Responsive Advertisement