ಎಲ್ಲರಿಗೂ ಪ್ಲವನಾಮ ಸಂವತ್ಸರದ ಶುಭಾಶಯಗಳು ಒಳ್ಳೆಯದಾಗಲಿ ಎಲ್ಲರಿಗೂ. ಸಂತೋಷದ ಈ ಫ್ಲವನಾಮ ಸಂವತ್ಸರವು ಎಲ್ಲರ ಬಾಳಲ್ಲಿ ನೆಮ್ಮದಿ ಸಂತೋಷ ಸುಖ ತರಲಿ.ಆದಿ ಕಾಲದಿಂದಲೂ ಯುಗಾದಿಯ ಉಲ್ಲೇಖ ಎಲ್ಲಾ ಹಿಂದೂ ಪುರಾಣಗಳಲ್ಲಿ ಆಗಿಯೇ ಇದ್ದು ಶಾಸ್ತç, ಗ್ರಂಥಗಳಲ್ಲಿ ಯುಗಾದಿಯನ್ನು ಕುರಿತು ಹೇಳಲಾಗಿದೆ. ರಾವಣನ ಜಯಿಸಿ ಬಂದಾಗ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಪಟ್ಟಾಭಿಷೇಕವಾದ ದಿನ ಈ ಯುಗಾದಿ ಅಲ್ಲದೆ ಮಹಾಭಾರತದಲ್ಲಿ ಬರುವ ಚೀದಿರಾಜ್ಯದ ಅರಸು ವಸುವಿನ ಉಗ್ರ ತಪಸ್ಸಿಗೆ ಮೆಚ್ಚಿದ ಇಂದ್ರನು ವೈಜಯಂತಿ ಮಾಲೆಯನ್ನು ಅವನಿಗೆ ಕೊಟ್ಟ ದಿನ ಈ ಯುಗಾದಿ .ಚತುರ್ಮುಖ ಬ್ರಹ್ಮ ಸೃಷ್ಠಿಯನ್ನು ಆರಂಭಿಸಿದ ದಿನ ಈ ಯುಗಾದಿ.
ಎಲ್ಲ ಹಬ್ಬಗಳಲ್ಲಿ ಯುಗಾದಿಯು ಶ್ರೇಷ್ಠ. ಈ ಹಬ್ಬವನ್ನು ಭಾರತದ ವಿವಿಧ ಬೇರೆ-ಬೇರೆ ಹೆಸರಿನಿಂದ, ಸಾಮಾನ್ಯವಾಗಿ ಎಲ್ಲರೂ ಆಚರಿಸುವರು. ಹಬ್ಬಗಳಲ್ಲಿ ಶ್ರೇಷ್ಠವಾದ ಪ್ರಸಿದ್ಧವಾದ ಯುಗಾದಿ ಹಬ್ಬ ಚ್ಯೆತ್ರ ಮಾಸದ ಶುಕ್ಲ ಪಕ್ಷದ ಪಾಡ್ಯದಂದು ಬರುತ್ತದೆ. ಯುಗಾದಿ ಹಬ್ಬವು ಹಿಂದುಗಳ ದೃಷ್ಟಿಯಲ್ಲಿ ವರ್ಷಾರಂಭದ ಪವಿತ್ರ ದಿನ. ಯುಗಾದಿಯ ಅರ್ಥ 'ಯುಗದ ಆದಿ'. 'ಯುಗಾದಿ' ಎಂಬ ಶಬ್ದ ಸಂಸ್ಕೃತದ 'ಯುಗ' ಮತ್ತು 'ಆದಿ' ಎಂಬ ಎರಡು ಶಬ್ದಗಳಿಂದ ಕೂಡಿದೆ. ಯುಗವೆಂದರೆ ಸೃಷ್ಟಿಯ ಕಾಲಮಾನ. ಆದಿ ಎಂದರೆ ಆರಂಭ.
ಚೈತ್ರ ಶುದ್ಧ ಪಾಡ್ಯಮಿ ಯುಗಾದಿಯನ್ನು ಚಂದ್ರಮಾನ-ಸೌರಮಾನ ಹೀಗೆ ಎರಡು ಬಗೆಯಲ್ಲಿ ಆಚರಿಸುವ ಪದ್ಧತಿ ಇದೆ. ಚಂದ್ರನ ಚಲನೆಯನ್ನು ಗುರುತಿಸಿ ಮಾಡುವ ಪದ್ಧತಿಗೆ ಚಂದ್ರಮಾನ ಯುಗಾದಿ ಎನ್ನುವರು. ಹಾಗೂ ಸೂರ್ಯನು ಮೇಷರಾಶಿಗೆ ಬಂದಾಗ ಸೌರಮಾನ ಯುಗಾದಿಯನ್ನು ಆಚರಿಸುವರು. ದಕ್ಷಿಣ ಭಾರತೀಯರು ಚಾಂದ್ರಮಾನವನ್ನು ಅನುಸರಿಸಿ ಚೈತ್ರಶುದ್ಧ ಪಾಡ್ಯಮಿಯಂದು ಯುಗಾದಿ ಆಚರಿಸುತ್ತಿರುವರು. ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟç ಗುಜರಾತ್ ಗಳಲ್ಲಿ ಚಂದ್ರಮಾನ ಯುಗಾದಿ ಆಚರಿಸಿದರೆ ತಮಿಳುನಾಡು, ಕೇರಳ ಮತ್ತು ಉತ್ತರ ಭಾರತದ ಕೆಲವು ಸ್ಥಳಗಳಲ್ಲಿ ಸೌರಮಾನ ಯುಗಾದಿ ಆಚರಿಸುತ್ತಾರೆ. ಉತ್ತರಭಾರತದಲ್ಲಿ ಕಾರ್ತಿಕ ಶುದ್ಧ ಪಾಡ್ಯಮಿಯನ್ನು ಯುಗಾದಿಯೆನ್ನುವರು. ಈ ಹಬ್ಬವನ್ನು ಭಾರತದಲ್ಲಿ ಬೇರೆ-ಬೇರೆ ಹೆಸರಿನಿಂದ ಆಚರಿಸುವರು. ಕರ್ನಾಟಕದಲ್ಲಿ 'ಯುಗಾದಿ', ಮಹಾರಾಷ್ಟçದಲ್ಲಿ 'ಗುಢಿಪಾಡವಾ', ಆಂಧ್ರ‍್ರಪ್ರದೇಶ ಹಾಗೂ ತಮಿಳುನಾಡಿನಲ್ಲಿ 'ಹೊಸ ವರ್ಷದ ಹಬ್ಬ'ವೆಂದು, ಉತ್ತರ ಭಾರತದಲ್ಲಿ 'ಬೈಸಾಖಿ' ಎಂದು ಇದು ಆಚರಿಸಲ್ಪಡುತ್ತದೆ.
ಬಿದಿಗೆ ಚಂದ್ರ ದರ್ಶನ ಅಂದು ‘ವರ್ಷ ತೊಡಕು' ಎಂದು ಆಚರಿಸಲಾಗುತ್ತದೆ. ಅಂದರೆ ಸತ್ಕಾರ್ಯಗಳಿಗೋಸ್ಕರ ನಮ್ಮನ್ನು ತೊಡಗಿಸಿಕೊಳ್ಳುವ ದಿನ. ವರ್ಷವಿಡೀ ಸುಖ ನೀಡುವಂತೆ, ಕಷ್ಟ ನಿವಾರಿಸುವಂತೆ ದೇವರಲ್ಲಿ ಪ್ರಾರ್ಥಿಸುವ ದಿವಸ. ಸೃಷ್ಟಿ ನಾಟಕದಲ್ಲಿ ನಾಲ್ಕು ಯುಗಗಳು ಇವೆ. ಸತ್ಯಯುಗ, ತ್ರೇತಾಯುಗ, ದ್ವಾಪರಯುಗ, ಮತ್ತು ಕಲಿಯುಗ. `ಆದಿ' ಎಂದರೆ ಪ್ರಾರಂಭ, ಪೂರ್ವಕಾಲ ಎಂದಾಗುತ್ತದೆ. ತಮಸೋಮಾ ಜ್ಯೋತಿರ್ಗಮಯಾ.... ಎಲ್ಲರಿಗೂ ಹೊಸ ವರುಷ ನವಚೈತನ್ಯವನ್ನು ನೀಡಲಿ
ನಾಗೇಂದ್ರ ಸಿಂಹ
9590735507

0 Comments