Ticker

6/recent/ticker-posts

Ad Code

Responsive Advertisement

ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಬಳ್ಳಾರಿ,ಏ.23: ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೊರೊನಾ ವೈರಸ್ ಸೊಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲಾದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಲ್ಲಿನ ಪ್ರದತ್ತವಾದ ಅಧಿಕಾರದ ಮೇರೆಗೆ ಈ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.


ಬಳ್ಳಾರಿ ಮಹಾನಗರ ವ್ಯಾಪ್ತಿಯಲ್ಲಿ ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 5ಕ್ಕಿಂತ ಹೆಚ್ಚು ಜನರು ಚುನಾವಣಾ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳದಂತೆ ಮುಂದಿನ ಆದೇಶದವರೆಗೆ ನಿಷೇಧಿಸಿ ಆದೇಶಿಸಲಾಗಿದೆ.

ಈ ಆದೇಶ ಪಾಲನೆಯಲ್ಲಿ ಲೋಪವೆಸಗುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಅಡಿ,ಭಾರತೀಯ ದಂಡ ಸಂಹಿತೆ ಹಾಗೂ ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಅನುಸಾರ ಕ್ರಮಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

Post a Comment

0 Comments

Ad Code

Responsive Advertisement