ಬೆಂಗಳೂರು, ಏಪ್ರಿಲ್ 15 (ಕರ್ನಾಟಕ ವಾರ್ತೆ) : ಕರ್ನಾಟಕ ಸಾಹಿತ್ಯ ಅಕಾಡೆಮಿಯು 2021ರ ಜೂನ್ ತಿಂಗಳಿನಲ್ಲಿ ವಿಶೇಷ ಘಟಕ ಯೋಜನೆಯಡಿ ರಾಜ್ಯಮಟ್ಟದ ಐದು ದಿನಗಳ “ಮಾಧ್ಯಮ ಪ್ರವೇಶಿಕೆ: ಬರಹ ಮತ್ತು ಸಂವಹನ ಕೌಶಲ” ಕಮ್ಮಟವನ್ನು ಹಮ್ಮಿಕೊಂಡಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿಯ 20 ರಿಂದ 50 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಏಪ್ರಿಲ್ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ಸಾಹಿತ್ಯ ಅಕಾಡೆಮಿಯ ವೆಬ್‍ಸೈಟ್ http:// karntakasahithyaacademy.org ಇಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ.
0 Comments