Ticker

6/recent/ticker-posts

Ad Code

Responsive Advertisement

ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿಗೂ ಕೊರೋನಾ ಸೋಂಕು

 ಇದೀಗ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಅವರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ನಾನು ಕೋವಿಡ್-19 ಪರೀಕ್ಷೆ ಮಾಡಿಸಿಕೊಂಡಿದ್ದು, ಕೊರೋನಾ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅವರು ಟ್ವೀಟ್ ಮಾಡಿದ್ದಾರೆ.


ಕರ್ನಾಟಕದಲ್ಲಿ ನಿನ್ನೆ ಮತ್ತೆ 15 ಸಾವಿರದ ಗಡಿ ಸಮೀಪಿಸಿರುವ ಕೊರೋನಾ ಸೋಂಕಿತರ ಸಂಖ್ಯೆ ಇಂದು ಮತ್ತಷ್ಟು ಹೆಚ್ಚುವ ಸಾಧ್ಯತೆಯಿದೆ. ನಿನ್ನೆ ಒಂದೇ ದಿನ ರಾಜ್ಯದಲ್ಲಿ ಕೊರೋನಾದಿಂದ 78 ಜನರು ಸಾವನ್ನಪ್ಪಿದ್ದಾರೆ. 577 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರೊಂದರಲ್ಲೇ ಸುಮಾರು 10 ಸಾವಿರ ಕೊರೋನಾ ಕೇಸ್​ಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 9,917 ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. 57 ಜನರು ಸಾವನ್ನಪ್ಪಿದ್ದಾರೆ.

ಕೊರೋನಾ ಸೋಂಕು ತಗುಲಿರುವುದರಿಂದ ಆಸ್ಪತ್ರೆಯಿಂದಲೇ ಸಚಿವರಿಗೆ ಸೂಚನೆಗಳನ್ನು ನೀಡುತ್ತಿರುವ ಸಿಎಂ ಯಡಿಯೂರಪ್ಪ ಸರ್ವ ಪಕ್ಷ ಸಭೆಯನ್ನು ಮುಂದೂಡಿದ್ದಾರೆ. ರಾಜ್ಯದಲ್ಲಿ 15 ಸಾವಿರದ ಗಡಿಯತ್ತ ಕೊರೋನಾ ಕೇಸುಗಳು ದಾಪುಗಾಲಿಡುತ್ತಿದ್ದರೂ ಲಾಕ್​ಡೌನ್​ಗೆ ಸಿಎಂ ಯಡಿಯೂರಪ್ಪ ಸುತಾರಾಂ ಒಪ್ಪುತ್ತಿಲ್ಲ ಎನ್ನಲಾಗುತ್ತ್ತಿದೆ.


Post a Comment

0 Comments

Ad Code

Responsive Advertisement