Ticker

6/recent/ticker-posts

Ad Code

Responsive Advertisement

ಪೊಲೀಸರಿಗೆ ಪ್ರತ್ಯೇಕ ಕೊರೊನಾ ಕೇರ್ ಸೆಂಟರ್

ಬೆಂಗಳೂರು,ಏ.28- ಪೊಲೀಸರಿಗೆ ಪ್ರತ್ಯೇಕವಾಗಿ ಕೊರೊನಾ ಕೇರ್ ಸೆಂಟರ್ ನಿರ್ಮಾಣ ಮಾಡಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್‍ಪಂಥ್ ತಿಳಿಸಿದ್ದಾರೆ. ಕೊರೊನಾ ಸೋಂಕಿತ ಪೊಲೀಸ್ ಸಿಬ್ಬಂದಿಗಳಿಗಾಗಿ 200 ಬೆಡ್‍ಗಳ ವ್ಯವಸ್ಥೆ ಮಾಡಲಾಗುತ್ತಿದೆ. ವೈಟ್‍ಫೀಲ್ಡ್ ಮತ್ತು ಸಿಎಆರ್ ಹೆಡ್ ಕ್ವಾಟ್ರರ್ಸ್‍ಗಳು ಸೇರಿದಂತೆ ವಿವಿಧ ಕಡೆ ಬೆಡ್‍ಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು. ನಗರದಲ್ಲಿಂದು 42 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕೋವಿಡ್ ಪಾಸಿಟೀವ್ ಕಾಣಿಸಿಕೊಂಡಿದೆ. 


ಇದುವರೆಗೂ 656 ಮಂದಿ ಸಿಬ್ಬಂದಿಗೆ ಸೋಂಕು ತಗುಲಿದ್ದು, ಈ ಪೈಕಿ 100 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದಾರೆ. 59 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 491 ಪೆÇಲೀಸ್ ಸಿಬ್ಬಂದಿ ಮನೆಯಲ್ಲೇ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದರೆ, 6 ಮಂದಿ ಮೃತಪಟ್ಟಿದ್ದಾರೆ. 100 ಬೆಡ್‍ಗಳನ್ನು ಈಗಾಗಲೇ ವ್ಯವಸ್ಥೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಬೆಡ್‍ಗಳನ್ನು ವಿಸ್ತರಣೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.

Post a Comment

0 Comments

Ad Code

Responsive Advertisement