Ticker

6/recent/ticker-posts

Ad Code

Responsive Advertisement

ಜಿಲ್ಲಾ ಸತ್ರ ನ್ಯಾಯಾಧೀಶರ ಕಛೇರಿಯಲ್ಲಿ ಜವಾನ (Peon) ಹುದ್ದೆಗೆ ಅರ್ಜಿ ಅಹ್ವಾನ

ಬೆಂಗಳೂರು, ಏಪ್ರಿಲ್ 23 (ಕರ್ನಾಟಕ ವಾರ್ತೆ) :ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ 34 ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್  http://districts.ecourts.gov.in/dakshninakannada-online recruitment ನೀಡಲಾಗಿರುವ ಲಿಂಕ್ ಮುಖಾಂತರ ದಿನಾಂಕ: 19-04-2021ರಿಂದ 25-05-2021ರ ರಾತ್ರಿ ಒಳಗಾಗಿ ಸಲ್ಲಿಸ ತಕ್ಕದ್ದು.


ಅನ್‍ಲೈನ್ ಹೊರತುಪಡಿಸಿ, ಖುದ್ದಾಗಿ, ಅಂಚೆ ಮೂಲಕ ಅಥವಾ ಇನ್ಯಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.

ಅರ್ಜಿ ಸಲ್ಲಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ತಿಳಿದಿರಬೇಕು. ಅರ್ಜಿಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಹಾಗೂ ಪ್ರವರ್ಗ - 1 ರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಸಂಬಂಧಿಸಿದ ಪ್ರಾಧಿಕಾರ ನೀಡುವ ಜಾತಿ ದೃಢೀಕರಣ ಪತ್ರ ಹೊಂದಿದ್ದಲ್ಲಿ ಗರಿಷ್ಠ ವಯೋಮಿತಿ 40 ವರ್ಷ.

ಪ್ರವರ್ಗ -2ಎ, 2ಬಿ, 3ಎ, ಮತ್ತು 3ಬಿ ಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಸಂಬಂಧಿಸಿದ ಪ್ರಾಧಿಕಾರ ನೀಡುವ ಜಾತಿ ದೃಢೀಕರಣ ಪತ್ರ ಹೊಂದಿದ್ದಲ್ಲಿ ಗರಿಷ್ಠ ವಯೋಮಿತಿ 38 ವರ್ಷ ಹಾಗೂ ಸಾಮಾನ್ಯ ವರ್ಗದ ಅಭ್ಯಥಿಗಳಿಗೆ ಗರಿಷ್ಠ ವಯೋಮಿತಿ 35 ವರ್ಷ. ಮಾಜೀ ಸೈನಿಕರಿಗೆ ಗರಿಷ್ಠ ವಯೋಮಿತಿಯಲ್ಲಿ ಅವರು ಸಶಸ್ತ್ರ ದಳಗಳಲ್ಲಿ ಎಷ್ಟು ವರ್ಷಗಳ ಸೇವೆ ಸಲ್ಲಿಸಿರುವರೋ ಆವರ್ಷಗಳಿಗೆ ಮೂರು ವರ್ಷಗಳನ್ನು ಸೇರಿಸಿದರೆ ಎಷ್ಟು ವರ್ಷಗಳಾಗುವುದೋ ಆಷ್ಟು ವರ್ಷಗಳ ಸಡಿಲಿಕೆ ಇರುತ್ತದೆ. ಹೆಚ್ಚಿನ ಮಾಹಿತಿಯನ್ನು
 http://districts.ecourts.gov.in/dakshninakannada-online recruitment     ನಲ್ಲಿ ಪಡೆಯಲು ಅಧಿಕೃತ ಪ್ರಕಟಣೆ ತಿಳಿಸಿದೆ. 

Post a Comment

0 Comments

Ad Code

Responsive Advertisement