ನವದೆಹಲಿ,: 22 ಲಕ್ಷ ಕೊರೊನಾ ಸೋಂಕು ತಪಾಸಣೆ ನಡೆಸುವ ಮೂಲಕ ಭಾರತ ದಾಖಲೆ ಮಾಡಿದೆ. ಕಳೆದ 24 ಗಂಟೆಗಳಲ್ಲಿ 2,08,921 ಲಕ್ಷ ಮಂದಿಗೆ ಸೋಂಕು ಕಾಣಿಸಿಕೊಂಡಿದೆ. 2.08 ಲಕ್ಷ ಮಂದಿ ಸೋಂಕಿಗೆ ಗುರಿಯಾಗಿರುವುದರಿಂದ ದೇಶದ ಒಟ್ಟು ಸೋಂಕಿತರ ಸಂಖ್ಯೆ 2,71,57,795 ಕೋಟಿಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳಲ್ಲಿ ಉಲ್ಲೇಖಿಸಲಾಗಿದೆ. 2,71ಕೋಟಿ ಸೋಂಕಿತರ ಪೈಕಿ ಈಗಾಗಲೇ 2,43 ಕೋಟಿಗೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ.ಕಳೆದ ಮೇ.4 ರಂದು ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ 2 ಕೋಟಿ ಗಡಿ ದಾಟಿತ್ತು. ಇದೀಗ ದೇಶದಲ್ಲಿ 2,71 ಕೋಟಿ ಸೋಂಕಿತರಿದ್ದು, ಸೋಂಕಿನ ಪ್ರಮಾಣ ದಿನೇ ದಿನೇ ಕಡಿಮೆಯಾಗುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.
ಸೋಂಕಿನ ಪಾಸಿಟಿವಿಟಿ ರೇಟ್ ಕೂಡ ಶೇ.9.42 ಕ್ಕೆ ಕುಸಿದಿದೆ ಇದರ ಜತೆಗೆ ವಾರದ ಪಾಸಿಟಿವಿಟಿ ದರ ಶೇ.11.45ಕ್ಕೆ ಕುಸಿದಿರುವುದು ಕಂಡು ಬಂದಿದೆ.ರಾಷ್ಟ್ರೀಯ ಕೊರೊನಾ ಚೇತರಿಕೆ ಪ್ರಮಾಣ ಶೇ.89.66ಕ್ಕೆ ಏರಿಕೆಯಾಗಿರುವುದರಿಂದ ಸಕ್ರಿಯ ಸೋಂಕಿನ ಪ್ರಮಾಣ 24,95,59 ಲಕ್ಷಕ್ಕೆ ಕುಸಿದಿದೆ.ನಿನ್ನೆಯಿಂದ 4157 ಮಂದಿ ಮಹಾಮಾರಿಗೆ ಬಲಿಯಾಗಿರುವುದರಿಂದ ಕೊರೊನಾ ಸೋಂಕಿನಿಂದ ಮೃತರಾದವರ ಸಂಖ್ಯೆ 3,11,388 ಲಕ್ಷಕ್ಕೆ ಹೆಚ್ಚಳಗೊಂಡಿದೆ. ನಿನ್ನೆ ಒಂದೇ ದಿನ ದೇಶದಲ್ಲಿ 22,17,320 ಲಕ್ಷ ಮಂದಿಗೆ ಕೊರೊನಾ ತಪಾಸಣೆ ನಡೆಸಲಾಗಿದೆ. ದೇಶದಲ್ಲಿ ಇದುವರೆಗೂ 33 ಕೋಟಿಗೂ ಹೆಚ್ಚು ಮಂದಿಯನ್ನು ತಪಾಸಣೆಗೆ ಒಳಪಡಿಸಿದಂತಾಗಿದೆ.

0 Comments