Ticker

6/recent/ticker-posts

Ad Code

Responsive Advertisement

ಮಹದೇವಪುರ: 250 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ :ಸಚಿವ ಲಿಂಬಾವಳಿ

 ಬೆಂಗಳೂರು :


ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುನ್ನೆಕೊಳಲು ಗ್ರಾಮದಲ್ಲಿ 250 ಹಾಸಿಗೆ ಸಾಮರ್ಥ್ಯದ ಸರ್ಕಾರಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಈ ಸಂಬಂಧ ಮುನ್ನೇಕೊಳಾಲು ಗ್ರಾಮದ ಸರ್ವೇ ನಂಬರ್ 36 ರಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಕ್ತರ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಜೆ ಮಂಜುನಾಥ್ ಅವರುಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದ ಸಚಿವ ಅರವಿಂದ ಲಿಂಬಾವಳಿ ನಂತರ ಸುದ್ದಿ ಮಾಧ್ಯಮಗಳೊಂದಿಗೆ ಮಾತನಾಡಿದರು.

ಈ ಮೊದಲು ಸಿದ್ದಾಪುರದಲ್ಲಿ ಈ ಸರ್ಕಾರಿ ಆಸ್ಪತ್ರೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿತ್ತು, ಯೋಜನೆ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದರಿಂದ ಈಗ ಮುನ್ನೆಕೊಳಲು ಗ್ರಾಮದಲ್ಲಿ ಭೂಮಿ ಗುರುತಿಸಲಾಗಿದೆ. ಈ ಆಸ್ಪತ್ರೆಗಾಗಿ 4 ಎಕರೆ 7 ಗುಂಟೆ ಭೂಮಿ ಮೀಸಲಿರಿಸಿದೆ. ಈ ಭೂಮಿಯನ್ನು ಈಗಾಗಲೇ ಆರೋಗ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ.

ಟಾಸ್ಕ್ ಫೋರ್ಸ್ ಕೂಡ ಬೆಂಗಳೂರಿಗೆ ಹೆಚ್ಚಿನ ಆಸ್ಪತ್ರೆಗಳು ಬೇಕಾಗಿದೆ ಎಂದು ಶಿಫಾರಸು ಮಾಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಆದಷ್ಟು ಶೀಘ್ರವಾಗಿ ಚಾಲನೆ ನೀಡಲಾಗುವುದು. ಮಕ್ಕಳಿಗಾಗಿ ವಿಶೇಷ ವಾರ್ಡ್ ಮತ್ತು ಹೆರಿಗೆ ಆಸ್ಪತ್ರೆ ಒಳಗೊಂಡಂತೆ ಜಿಲ್ಲಾ ಆಸ್ಪತ್ರೆಯಲ್ಲಿರುವ ಎಲ್ಲಾ ಸೌಲಭ್ಯ ಒಳಗೊಂಡ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ಅವರು ತಿಳಿಸಿದರು.

Post a Comment

0 Comments

Ad Code

Responsive Advertisement