Ticker

6/recent/ticker-posts

Ad Code

Responsive Advertisement

ಕೊರೋನಾಗೆ ಬಲಿಯಾದವರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ನೀಡಬೇಕು: ಸುಪ್ರೀಂ

ನವದೆಹಲಿ : ಮಹಾಮಾರಿ ಕೊರೊನಾಗೆ ಮೃತಪಟ್ಟ ಕುಟುಂಬಕ್ಕೆ 4 ಲಕ್ಷ ರೂ.ಗಳ ಪರಿಹಾರ ನೀಡಲು ಆದೇಶಿಸಬೇಕು ಎಂದು ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿರುವ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸಮಜಾಯಿಷಿ ನೀಡುವಂತೆ ನೋಟಿಸ್ ಜಾರಿ ಮಾಡಿದೆ.


ರಜಾಕಾಲದ ನ್ಯಾಯಪೀಠದ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಹಾಗೂ ಎಂ.ಆರ್.ಷಾ ಅವರನ್ನೊಳಗೊಂಡ ವಿಭಾಗೀಯ ಪೀಠ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದ್ದು, ಕೊರೊನಾ ಸೋಂಕಿನಿಂದ ಮೃತಪಟ್ಟವರಿಗೆ ಮರಣ ಪ್ರಮಾಣ ಪತ್ರ ವಿತರಿಸಲಾಗಲು ರೂಪಿಸಿರುವ ಐಸಿಎಂಆರ್ ಮಾರ್ಗಸೂಚಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ.

ಕೊರೊನಾ ಸೋಂಕಿನಿಂದ ಮೃತಪಟ್ಟವರ ಕುಟುಂಬಗಳಿಗೆ 4 ಲಕ್ಷ ಪರಿಹಾರಧನ ನೀಡಬೇಕು ಹಾಗೂ ಸೋಂಕಿನಿಂದ ಮೃತಪಟ್ಟವರಿಗೆ ಮರಣ ಪ್ರಮಾಣ ಪತ್ರ ವಿತರಿಸಲು ಏಕರೂಪಿ ಮಾರ್ಗಸೂಚಿ ರಚಿಸಬೇಕು ಎಂದು ಸಲ್ಲಿಕೆಯಾಗಿರುವ ಎರಡು ಪ್ರತ್ಯೆಕ ಪಿಐಎಲ್‍ಗಳ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿರುವ ನ್ಯಾಯಾಲಯ ಈ ಆದೇಶ ಹೊರಡಿಸಿದೆ.

ಕೊರೊನಾ ಸೋಂಕಿನಿಂದ ಮೃತಪಟ್ಟ ಕುಟುಂಬ ವರ್ಗದವರಿಗೆ ಮರಣ ಪ್ರಮಾಣ ಪತ್ರ ಲಭ್ಯವಾಗದಿದ್ದರೆ ಅಂತವರಿಗೆ ಇತರ ಪರಿಹಾರಗಳ ಪ್ರಯೋಜನದಿಂದ ವಂಚಿತರಾಗುವುದರಿಂದ ಏಕರೂಪ ನೀತಿ ಜಾರಿಗೆ ತರುವಂತೆ ನ್ಯಾಯಾಲಯ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿ ಮುಂದಿನ ವಿಚಾರಣೆಯನ್ನು ಜೂನ್ 11ಕ್ಕೆ ನಿಗದಿಪಡಿಸಲಾಗಿದೆ.



Post a Comment

0 Comments

Ad Code

Responsive Advertisement