Ticker

6/recent/ticker-posts

Ad Code

Responsive Advertisement

ಕೊರೋನಾ : ದೇಶದಲ್ಲಿ 50 ದಿನಗಳ ಬಳಿಕ ಒಂದೂವರೆ ಲಕ್ಷ ಪ್ರಕರಣ ಪತ್ತೆ

ನವದೆಹಲಿ(ಮೇ 31): ದೇಶವನ್ನು ಕಾಡಿ ಕಂಗೆಡಿಸಿದ್ದ ಕೊರೋನಾ ಎರಡನೇ ಅಲೆ ಈಗ ಚೇತರಿಕೆಯ ಲಕ್ಷಣಗಳು ಗೋಚರಿಸತೊಡಗಿವೆ. 50 ದಿನಗಳ ಬಳಿಕ ದೇಶದ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಒಂದು ಲಕ್ಷದಷ್ಟು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳಲ್ಲಿ ಹಾಗೂ ಕೊರೋನಾದಿಂದ ಸಾಯುತ್ತಿರುವವರ ಸಂಖ್ಯೆಯಲ್ಲೂ ಗಣನೀಯ ಇಳಿಕೆ ಕಂಡುಬಂದಿರುವುದು ಜನತೆಯಲ್ಲಿ ಆಶಾಭಾವ  ಮೂಡಿಸಿದೆ.


ವಿದೇಶಿ ತಜ್ಞರ ಅಭಿಪ್ರಾಯದಂತೆ ಮೇ 6ರಂದು 4,14,188 ಪ್ರಕರಣಗಳು ಕಂಡುಬಂದಿದ್ದು ದೇಶದಲ್ಲಿ ದಿನ ಒಂದರಲ್ಲಿ ದಾಖಲಾದ ಅತಿ ಹೆಚ್ಚು ಪ್ರಕರಣಗಳು ಎಂಬ ದಾಖಲೆಯಾಗಿತ್ತು. ನಂತರ ಕೆಳಮುಖವಾಗಿ ಸಾಗಿ ಮೇ 16ರಂದು ಮೊದಲ ಬಾರಿಗೆ ಮೂರು ಲಕ್ಷಕ್ಕೂ ಕಡಿಮೆ ಪ್ರಕರಣಗಳು (2,81,386) ಕಂಡು ಬಂದಿದ್ದವು. ಮೇ 24ರಂದು ಮೊದಲ ಬಾರಿಗೆ ಎರಡು ಲಕ್ಷಕ್ಕಿಂತ ಕಡಿಮೆ (1,96,427) ಪ್ರಕರಣಗಳು ಪತ್ತೆ ಆಗಿದ್ದವು. ಮೇ 31ರಂದು ಕೇಸುಗಳ ಸಂಖ್ಯೆ ಒಂದೂವರೆ ಲಕ್ಷದ (1,52,734) ಸಮೀಪ ಬಂದಿದೆ.  ಇದಕ್ಕೂ ಮೊದಲು ಏಪ್ರಿಲ್ 10ರಂದು 1,52,879 ಪ್ರಕರಣಗಳು ಪತ್ತೆಯಾಗಿದ್ದವು.

ಸೋಮವಾರ 1,52,734 ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 2,80,47,534ಕ್ಕೆ ಏರಿಕೆ ಆಗಿದೆ. ಶುಕ್ರವಾರ 3,128 ಜನರು ಬಲಿ ಆಗಿದ್ದು ಈವರೆಗೆ ಕೊರೋನಾದಿಂದ ಸತ್ತವರ ಸಂಖ್ಯೆ 3,29,100ಕ್ಕೆ ಏರಿಕೆ ಆಗಿದೆ. ದೇಶದಲ್ಲಿ ಇನ್ನೂ 20,26,092 ಆಕ್ಟಿವ್ ಕೇಸುಗಳಿವೆ. ದೇಶದಲ್ಲಿ ಕೊರೋನಾ ಲಸಿಕೆ ಪಡೆದುಕೊಂಡವರ ಸಂಖ್ಯೆ 21 ಕೋಟಿ ದಾಟಿದೆ. ಈವರೆಗೆ 21,31,54,129 ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದೆ.

ಈವರೆಗೆ 2,56,92,342 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 2,38,022 ರೋಗಿಗಳು ಚೇತರಿಸಿಕೊಂಡಿದ್ದಾರೆ. ಸತತವಾಗಿ 18ನೇ ದಿನವೂ ದೈನಂದಿನ ಹೊಸ ಪ್ರಕರಣಗಳಿಗಿಂತ ಗುಣ ಆಗುವವರ ಸಂಖ್ಯೆ ಹೆಚ್ಚಾಗಿದೆ. ಸದ್ಯದ ಪಾಸಿಟಿವಿಟಿ ದರ ಶೇಖಡಾ 91.60ರಷ್ಟಾಗಿದೆ. ಸಾಪ್ತಾಹಿಕ ಪಾಸಿಟಿವಿಟಿ ದರ ಪ್ರಸ್ತುತ 9.04ರಷ್ಟಾಗಿದೆ. ದೈನಂದಿನ ಪಾಸಿಟಿವಿಟಿ ದರ 9.07ರಷ್ಟಾಗಿದ್ದು ಸತತವಾಗಿ 7 ದಿನಗಳವರೆಗೆ ಶೇಕಡಾ 10ಕ್ಕಿಂತ ಕಡಿಮೆ ಇದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಸದ್ಯ ಅತಿ ಹೆಚ್ಚು ಪ್ರಕರಣಗಳ ಪೈಕಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಪ್ರಥಮ ಸ್ಥಾನದಲ್ಲಿ ತಮಿಳುನಾಡು, ಎರಡನೇ ಸ್ಥಾನದಲ್ಲಿ ಕೇರಳ ದಾಪುಗಾಲಿ ಇಟ್ಟಿದೆ. ಚೇತರಿಕೆಯ ಹಾದಿಯಲ್ಲಿರುವ ಮಹಾರಾಷ್ಟ್ರ ನಾಲ್ಕನೇ ಸ್ಥಾನದಲ್ಲಿದೆ. ಅತಿ ಹೆಚ್ಚು ಪ್ರಕರಣಗಳು ಕಂಡು ಬರುತ್ತಿರುವ ನಾಲ್ಕು ರಾಜ್ಯಗಳೂ ದಕ್ಷಿಣ ಭಾರತಕ್ಕೆ ಸೇರಿದವಾಗಿವೆ. ಸಾವಿನ ಸಂಖ್ಯೆಯಲ್ಲಿ ಹಾಗೂ ಸಕ್ರೀಯ ಪ್ರಕರಣಗಳ ಸಂಖ್ಯೆಯಲ್ಲೂ ದಕ್ಷಿಣ ಭಾರತದ ರಾಜ್ಯಗಳೇ ಮುಂದೆ ಇವೆ.

Post a Comment

0 Comments

Ad Code

Responsive Advertisement