ಮೇ 31ಕ್ಕೆ ಮುಂಗಾರು ಆಗಮನವಾಗಲಿದೆ ಎಂದು ಆರಂಭದಲ್ಲಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದರೂ, ಬಳಿಕ ದಿನಾಂಕವನ್ನು ಪರಿಷ್ಕರಿಸಿ ಜೂ.3ಕ್ಕೆ ಕೇರಳಕ್ಕೆ ಆಗಮಿಸಲಿದೆ ಎಂಬ ಮಾಹಿತಿ ನೀಡಿದೆ.
ಕರಾವಳಿ ಭಾಗದಲ್ಲಿ ಮುಂಗಾರು ಪೂರ್ವ ಮಳೆ ಇನ್ನಷ್ಟು ಚುರುಕಾಗಿದ್ದು, ಸೋಮವಾರ ಹಲವೆಡೆ ಭಾರಿ ಮಳೆ ಸುರಿದಿದೆ. ನೈರುತ್ಯ ಮಾನ್ಸೂನ್ ಜೂನ್ 3ರ ಸುಮಾರಿಗೆ ಕೇರಳ ಕರಾವಳಿಯನ್ನು ಪ್ರವೇಶಿಸುವ ಸಾಧ್ಯತೆ ಇದ್ದು, ರಾಜ್ಯಕ್ಕೆ ಜೂನ್ 5 ರಂದು ಬರುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 5 ದಿನಗಳು ರಾಜ್ಯದ ಒಳನಾಡಿನ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದ್ದು, ವಿಶೇಷವಾಗಿ ಬೀದರ್, ಕಲಬುರಗಿ, ಗದಗ, ಕೊಪ್ಪಳ ಮತ್ತು ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
0 Comments