Ticker

6/recent/ticker-posts

Ad Code

Responsive Advertisement

BELLARY : ಖಾಸಗಿ ಆಸ್ಪತ್ರೆ ದಾಖಲಿಸಿಕೊಳ್ಳಲು,ಚಿಕಿತ್ಸೆ ನೀಡಲು ನಿರಾಕರಿಸಿದ್ರೇ ದೂರು ನೀಡಿ

ಸರ್ಕಾರಿ ಕೋಟಾದ ರೋಗಿಗಳ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸುತ್ತದೆ: ಡಿಎಚ್‌ಒ ಡಾ.ಜನಾರ್ಧನ್

ಬಳ್ಳಾರಿ,ಮೇ29:ಕೋವಿಡ್ ರೋಗಿಗಳಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಆಸ್ಪತ್ರೆಗಳ ಮೂಲಕ ಚಿಕಿತ್ಸೆ ನೀಡಲಾಗುತ್ತಿದ್ದು, ಸರ್ಕಾರಿ ಕೋಟಾದಡಿಯಲ್ಲಿ ಆಸ್ಪತ್ರೆಗಳಿಗೆ ದಾಖಲಾಗುವ ಕೋವಿಡ್ ರೋಗಿಗಳಿಗೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜನಾರ್ಧನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಿಎಚ್‌ಬಿಎಂಎಸ್ ಪೋರ್ಟಲ್ ಮೂಲಕ ಹಾಗೂ ಇತರೆ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ರೆಫರೆಲ್ ಮೂಲಕ ಸರ್ಕಾರಿ ಕೋಟಾದಲ್ಲಿ ಆಸ್ಪತ್ರೆಗಳಿಗೆ ದಾಖಲಾಗುವ ರೋಗಿಗಳಿಗೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. ಇದರ ಜೊತೆಗೆ ಸರ್ಕಾರಿ ಕೋಟಾದ ರೋಗಿಗಳಿಗೆ ರೆಮ್‌ಡಿಸಿವಿರ್ ಲಸಿಕೆಯನ್ನು ಉಚಿತವಾಗಿ ಒದಗಿಸಲಾಗುತ್ತದೆ.ಕೋವಿಡ್ ರೋಗಿಗಳು ನೇರವಾಗಿ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡಲ್ಲಿ ಸರ್ಕಾರವು ನಿಗದಿಪಡಿಸಿದ ದರದಲ್ಲಿ ಚಿಕಿತ್ಸೆ ನೀಡಬೇಕು. ಜನರಲ್ ವಾರ್ಡ್ಗೆ 10 ಸಾವಿರ, ಹೆಚ್‌ಡಿಯುಗೆ 12ಸಾವಿರ, ಐಸೋಲೇಶನ್ ಐಸಿಯು ವೆಂಟಿಲೇಟರ್ ಇಲ್ಲದೆ 15 ಸಾವಿರ ಹಾಗೂ ಐಸೋಲೇಶನ್ ಐಸಿಯು ವೆಂಟಿಲೇಟರ್ ಸಹಿತ 25 ಸಾವಿರ ಎಂದು ಸರ್ಕಾರ ನಿಗದಿಪಡಿಸಿದ್ದು, ಈ ನಿಗದಿಪಡಿಸಿದ ದರಗಳಲ್ಲಿಯೇ ಚಿಕಿತ್ಸೆ ನೀಡಬೇಕು ಎಂದು ಅವರು ತಿಳಿಸಿದ್ದಾರೆ.ಖಾಸಗಿ ಆಸ್ಪತ್ರೆಗಳು ಕೋವಿಡ್ ರೋಗಿಗಳನ್ನು ದಾಖಲು ಮಾಡಿಕೊಳ್ಳಲು ನಿರಾಕರಿಸಿದರೆ ಅಥವಾ ಚಿಕಿತ್ಸೆ ನೀಡಲು ವಿಳಂಬ ಮಾಡಿದರೆ ಅಥವಾ ಸರ್ಕಾರ ನಿಗದಿ ಪಡಿಸಿರುವ ದರಗಳಿಗಿಂತ ಹೆಚ್ಚಿನ ದರವನ್ನು ವಿಧಿಸಿದರೆ 18004258330 ಗೆ ಹಾಗೂ 1912 ಮೂಲಕ ಮತ್ತು ದೂ.ಸಂ:08022536200 ಗೆ ದೂರು ಸಲ್ಲಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Post a Comment

0 Comments

Ad Code

Responsive Advertisement