Ticker

6/recent/ticker-posts

Ad Code

Responsive Advertisement

ಹಳ್ಳಿಗಳಲ್ಲಿ ಟೆಸ್ಟ್ ಹೆಚ್ಚಿಸುವಂತೆ ಸಿಎಂ ಯಡಿಯೂರಪ್ಪ ಸೂಚನೆ

ಬೆಂಗಳೂರು(ಮೇ 29): ಕೊರೋನಾ ಸೋಂಕು ಹೆಚ್ಚಿರುವ ಜಿಲ್ಲೆಗಳ ಜನಪ್ರತಿನಿಧಿಗಳ ಜೊತೆ  ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸುತ್ತಿದ್ದಾರೆ. ಶಾಸಕರು, ಸಂಸದರು, ಪರಿಷತ್ ಸದಸ್ಯರು, ರಾಜ್ಯಸಭೆ ಸದಸ್ಯರ ಜೊತೆ ವಿಡಿಯೋ ಕಾನ್ಫೆರೆನ್ಸ್​ ಮೂಲಕ ಸಂವಾದ ನಡೆಸುತ್ತಿದ್ದಾರೆ. ಮೈಸೂರು, ಹಾಸನ, ಬೆಳಗಾವಿ, ಕಲ್ಬುರ್ಗಿ, ಮತ್ತು ವಿಜಯಪುರ ಜಿಲ್ಲೆಗಳ ಜನಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ. ಜಿಲ್ಲೆಗಳಲ್ಲಿ ಕೋವಿಡ್ ಸ್ಥಿತಿಗತಿ ಬಗ್ಗೆ ಮಹತ್ವದ ಸಮಾಲೋಚನೆ ನಡೆಸುತ್ತಿದ್ದಾರೆ. ವಿಡಿಯೋ ಕಾನ್ಪೆರೆನ್ಸ್ ನಲ್ಲಿ ಗೋವಿಂದ ಕಾರಜೋಳ, ಅಶ್ವಥ್ ನಾರಾಯಣ್,  ಆರ್ ಅಶೋಕ್, ಸರ್ಕಾರದ ಮುಖ್ಯಕಾರ್ಯದರ್ಶಿ ಪಿ ರವಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ. 



ಕಡಿಮೆ ಸೋಂಕು ಇರುವ ಹಳ್ಳಿಗಳಲ್ಲಿ ಇನ್ಮುಂದೆ ಸೋಂಕು ಹೆಚ್ಚಾಗದಂತೆ ನೋಡಿಕೊಳ್ಳಬೇಕು. ಸೋಂಕು ಹೆಚ್ಚಿರುವ ಹಳ್ಳಿಗಳ ಮೇಲೆ ನಿಗಾ ವಹಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ. ಹಳ್ಳಿಗಳಲ್ಲಿ ಸೋಂಕು ಹೆಚ್ಚಾಗಿದ್ದಲ್ಲಿ ಅಲ್ಲಿ ಅಗತ್ಯ ಚಿಕಿತ್ಸೆ ಕ್ರಮ ವಹಿಸಬೇಕು. ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಕೊಡಿಸಬೇಕು. ಈಗಾಗಲೇ ಸರ್ಕಾರದಿಂದ ಎಲ್ಲ ರೀತಿಯ ಚಿಕಿತ್ಸಾ ವ್ಯವಸ್ಥೆ ಮಾಡಲಾಗಿದೆ. ಅದನ್ನು ಬಳಸಿಕೊಂಡು ಕೊವೀಡ್ ಕಡಿಮೆ ಮಾಡಲು ಕ್ರಮ ವಹಿಸಬೇಕು. ನಗರ ಪ್ರದೇಶಗಳಲ್ಲಿ ಕೊವೀಡ್ ಹೆಚ್ಚಳವಾಗದ ರೀತಿ ಶ್ರಮ ವಹಿಸಬೇಕು ಎಂದು ಸಿಎಂ ಯಡಿಯೂರಪ್ಪ ಸೂಚಿಸಿದರು.










Post a Comment

0 Comments

Ad Code

Responsive Advertisement