ಜನವರಿ ತಿಂಗಳಿನಲ್ಲಿ ಬಿಎಂಟಿಸಿ ಶೇ 20ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ಅನುಮತಿ ಕೋರಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ದರ ಏರಿಕೆ ಸುಳಿವು ನೀಡಿದ್ದಾರೆ.
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಸಾರ್ವಜನಿಕರಿಗೆ ಬಸ್ ಪ್ರಯಾಣ ದರ ಏರಿಕೆಯ ಬಿಸಿಯೂ ತಟ್ಟಲಿದೆ. ಬಿಎಂಟಿಸಿಯು ಜನವರಿ ತಿಂಗಳಿನಲ್ಲಿ ಶೇ 20ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ಅನುಮತಿ ಕೋರಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ದರ ಏರಿಕೆಯ ಸುಳಿವು ನೀಡಿದ್ದಾರೆ.
ಸರಕಾರ 2020ರ ಫೆ. 25ರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಕೆಎಸ್ಆರ್ಟಿಸಿ, ವಾಯುವ್ಯ ಮತ್ತು ಈಶಾನ್ಯ ಸಾರಿಗೆ ಸಂಸ್ಥೆಗಳ ಪ್ರಯಾಣ ದರವನ್ನು ಶೇ 12ರಷ್ಟು ಹೆಚ್ಚಳ ಮಾಡಿತ್ತು. ಆದರೆ, ಬಿಎಂಟಿಸಿ ಪ್ರಯಾಣ ದರ ಏರಿಕೆಗೆ ಒಪ್ಪಿಗೆ ಕೊಟ್ಟಿರಲಿಲ್ಲ. ಇದೀಗ ದರ ಏರಿಕೆ ಪ್ರಸ್ತಾವದ ಚೆಂಡು ಮುಖ್ಯಮಂತ್ರಿಗಳ ಅಂಗಳದಲ್ಲಿದ್ದು, ಅನುಮೋದನೆ ನೀಡುವ ಸಾಧ್ಯತೆಗಳು ದಟ್ಟವಾಗಿವೆ.

0 Comments