ಬಿಜೆಪಿಯವರಿಗೆ ಸರ್ಕಾರ ನಡೆಸೋಕೆ ಆಗಲ್ಲ. ಎಲ್ಲರೂ ರಾಜೀನಾಮೆ ಕೊಟ್ಟು ಹೋಗಲಿ. ಕೊರೋನಾ ವೈರಸ್ ಸೋಂಕು ಮಿತಿಮೀರಿ ಹೆಚ್ಚಾಗುತ್ತಿರುವುದನ್ನು ತಡೆಯುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಬೇಕಿದ್ದರೆ ರಾಜ್ಯಪಾಲರ ಆಡಳಿತ ಬರಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕಿಡಿಕಾರಿದರು. 24 ರೋಗಿಗಳು ದುರ್ಮರಣಗೊಂಡ ಚಾಮರಾಜನಗರಕ್ಕೆ ಹೊರಡುವ ಮುನ್ನ ಇಲ್ಲಿಯ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ತನಗೆ ಸರಕಾರದ ಮೇಲೆ ನಂಬಿಕೆಯೇ ಹೊರಟುಹೋಗಿದೆ. ಅದಕ್ಕೆ ತಾನು ನಿನ್ನೆ ಮುಖ್ಯ ಕಾರ್ಯದರ್ಶಿ ಅವರನ್ನ ಭೇಟಿ ಮಾಡಿದ್ದು ಎಂದರು.
ಸತ್ತವರ ಕುಟುಂಬಸ್ಥರ ಜೊತೆ ಒಬ್ಬ ಮಂತ್ರಿಯಾದರೂ ಮಾತನಾಡಿದ್ದಾರಾ? ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಅವರು ಮೊನ್ನೆಯ ದುರ್ಘಟನೆಯಲ್ಲಿ ಸಾವನ್ನಪ್ಪಿರುವ ಸಂಬಂಧಿಕರನ್ನು ಮಾತನಾಡಿಸಿ ಧೈರ್ಯ ತುಂಬುವ ಕೆಲಸ ಮಾಡಿಲ್ಲ. ಸರ್ಕಾರವೇ ಭಯಗೊಂಡಂತಿದೆ. ಹಾಗಾಗಿ ಆರೋಗ್ಯ ಸಚಿವ ಸೇರಿ ಎಲ್ಲರೂ ರಾಜೀನಾಮೆ ಕೊಟ್ಟು ಹೋಗಲಿ ಎಂದು ಡಿಕೆಶಿ ಆಗ್ರಹಿಸಿದರು.“ಸರ್ಕಾರ ಲಾಕ್‌ಡೌನ್ ಒಂದೇ ಮದ್ದು ಎಂದು ನಂಬಿಕೊಂಡಂತಿದೆ, ಪೂರ್ವ ತಯಾರಿ, ಸ್ಪಷ್ಟ ಕಾರ್ಯತಂತ್ರವಿಲ್ಲದ ಏಕಾಏಕೀಯ ಲಾಕ್‌ಡೌನ್‌ನಿಂದ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಿದ್ದರು. ಸೂಕ್ತ ತಪಾಸಣೆ, ಐಸೋಲೇಶನ್, ಚಿಕಿತ್ಸೆಯ ವ್ಯವಸ್ಥೆ ಮಾಡದ ಪರಿಣಾಮ ಈಗ ಜಿಲ್ಲಾ ಕೇಂದ್ರಗಳಲ್ಲೂ ಸೋಂಕು ಉಲ್ಬಣಗೊಳ್ಳುತ್ತಿದೆ.
“ನಾವು ಈ ಹಿಂದೆಯೇ ಜಿಲ್ಲಾ ಕೇಂದ್ರಗಳತ್ತ ಗಮನ ಹರಿಸಿ ಎಂದು ಎಚ್ಚರಿಸಿದ್ದೆವು, ಸರ್ಕಾರ ಎಚ್ಚರಗೊಳ್ಳದ ಪರಿಣಾಮ ಈಗ ರಾಜ್ಯಾದ್ಯಾಂತ ಬೆಂಗಳೂರಿನ ಸ್ಥಿತಿಯೇ ನಿರ್ಮಾಣವಾಗಿ ಎಲ್ಲೆಡೆಯಿಂದಲೂ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ, ಆಕ್ಸಿಜನ್, ಬೆಡ್, ಔಷಧಗಳಿಲ್ಲದ ಸುದ್ದಿಗಳು ಬರತೊಡಗಿದೆ…. ಮೂಲಸೌಕರ್ಯಗಳಿಲ್ಲದ ಜಿಲ್ಲೆಗಳ ಸ್ಥಿತಿ ಶೋಚನೀಯವಾಗಿದೆ.
“@BSYBJP ಅವರೇ, ಉಸ್ತುವಾರಿ ಮಂತ್ರಿಗಳನ್ನು ಆಯಾ ಜಿಲ್ಲೆಗಳಲ್ಲೇ ಠಿಕಾಣಿ ಹೂಡಿಸಿ, ಪ್ರತಿ ಕುಂದು ಕೊರತೆಗಳನ್ನು ನಿಭಾಯಿಸುವಂತೆ ಆದೇಶ ಹೊರಡಿಸಿ…. ಆಶಾ ಕಾರ್ಯಕರ್ತೆಯರ ಮೂಲಕ ಹಳ್ಳಿಗಳಿಗೆ ತೆರಳಿದವರನ್ನು ಗುರುತಿಸಿ ಟೆಸ್ಟ್ ಮಾಡಿಸಿ, ಐಸೋಲೇಶನ್ ವ್ಯವಸ್ಥೆ ಮಾಡಿ. ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿನ ಸ್ಥಿತಿಗತಿಯ ವರದಿ ಪಡೆಯಿರಿ” ಎಂದು ಕೆಪಿಸಿಸಿ ತನ್ನ ಟ್ವಿಟ್ಟರ್ ಖಾತೆ ಮೂಲಕ ಸರ್ಕಾರಕ್ಕೆ ಸಲಹೆ ನೀಡಿದೆ.

0 Comments