ಕೇಂದ್ರ ಸರಕಾರ ನಿರಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸುತ್ತಿರುವುದನ್ನು ಖಂಡಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪ್ರದೇಶ ಕಾಂಗ್ರೆಸ್ ಬೆಂಗಳೂರಿನ ಶಿವಾನಂದ ವೃತ್ತದ ಬಳಿ ರೆಡ್ಡಿ ಪೆಟ್ರೋಲ್ ಬಂಕ್ ಸಮೀಪ 100 ನಾಟೌಟ್, ಪೆಟ್ರೋಲ್ ಪಿಕ್‌ಪಾಕೆಟ್ ಪ್ರತಿಭಟನೆ ನಡೆಸಿತು. ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ದಿನೇಶ್ ಗುಂಡೂರಾವ್ ಮತ್ತಿತರರು ಪಾಲ್ಗೊಂಡರು. ಈ ಪ್ರತಿಭಟನೆಯೂ ಇಂದಿನಿಂದ ಹಂತ-ಹಂತವಾಗಿ ರಾಜ್ಯಾದ್ಯಂತ ಐದು ದಿನಗಳ ಕಾಲ ನಡೆಯಲಿದೆ.








0 Comments