ಬೆಂಗಳೂರು, ಜೂನ್ 24 (ಕರ್ನಾಟಕ ವಾರ್ತೆ): ಕರ್ನಾಟಕ ಸರ್ಕಾರವು ನಾಡಿನ ಸಮಸ್ತ ಜನರಿಗೆ ಉಚಿತ ಲಸಿಕೆಯನ್ನು ಇದೇ ವರ್ಷ ಡಿಸೆಂಬರ್ ತಿಂಗಳ ಅಂತ್ಯದಲ್ಲಿ ಪೂರ್ಣಗೊಳಿಸುವುದಾಗಿ ವಾಗ್ದಾನ ನೀಡಿದರು.
ಇಂದು ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಬೆಂಗಳೂರು ಮತ್ತು ಆರೋಗ್ಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಸಹಯೋಗದೊಂದಿಗೆ ಕೋವಿಡ್-19 ಉಚಿತ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಸರ್ಕಾರದ ಹಲವಾರು ಕಾರ್ಯಕ್ರಮಗಳ ಜೊತೆಗೆ ಆರೋಗ್ಯ ಕ್ಷೇತ್ರಕ್ಕೆ ಈ ಸರ್ಕಾರವು ಅತ್ಯಂತ ಪ್ರಾಮುಖ್ಯತೆಯನ್ನು ನೀಡುವುದು ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಗಣನೀಯವಾದ ಸುದಾರಣೆಯನ್ನು ತಂದು, ನಾಡಿನ ಸಮಸ್ತ ಜನರ ಆರೋಗ್ಯವನ್ನು ಕಾಪಾಡುವುದು ಕರ್ನಾಟಕ ಸರ್ಕಾರದ ಆದ್ಯತೆ ಕಾರ್ಯಕ್ರಮವಾಗಿ ನಿಯೋಜಿಸಲಾಗುವುದು ಎಂದು ಹೇಳಿದರು.
ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ರಾಜ್ಯಾದಂತ ಇರುವ ವಕೀಲರು ಮತ್ತು ಅವರ ಕುಟುಂಬದವರಿಗೆ ಉಚಿತ ಲಸಿಕೆ ನೀಡುವ ಜನಪರ ಕಾಳಜಿ ಕಾರ್ಯಕ್ರಮವನ್ನು ರೂಪಿಸಿರುವುದು ಹೆಮ್ಮೆಯ ಸಂಗತಿ. ಈ ದಿಸೆಯಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿಗೆ ಕರ್ನಾಟಕ ಸರ್ಕಾರದೊಂದಿಗೆ ನಿರಂತರವಾಗಿ ಸಹಕಾರ ನೀಡುವುದಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕರ್ನಾಟಕ ಸರ್ಕಾರದ ಮಾನ್ಯ ಅಡ್ವೊಕೇಟ್ ಜನರಲ್‍ರವರು, ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಹಮ್ಮಿಕೊಂಡ ಈ ಜನಪರ ಕಾರ್ಯಕ್ರಮವು ಅತ್ಯಂತ ಸ್ತುತಿ ಅರ್ಹವಾದುದಲ್ಲದೆ ರಾಜ್ಯಾದ್ಯಾಂತ ಇರುವ ವಕೀಲರ ಸಂಘಗಳ ಮುಖಾಂತರ ವಕೀಲರಿಗೂ ಹಾಗೂ ಅವರ ಕುಟುಂಬದವರಿಗೂ ಉಚಿತ ಲಸಿಕೆ ನೀಡುವುದರ ಜೊತೆಗೆ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಪಟ್ಟವರ ಮಾಹಿತಿಯನ್ನು ಹಂಚಿಕೊಳ್ಳುವುದು ಹಾಗೂ ಸುಭದ್ರ ಆರೋಗ್ಯವಂತ ನಾಡನ್ನು ಕಟ್ಟುವಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಅತ್ಯಂತ ಸಂವೇದನೆಶೀಲತೆಯಿಂದ ಕಾರ್ಯನಿರ್ವಹಿಸಬೇಕೆಂದು ಕಿವಿ ಮಾತನ್ನು ಹೇಳಿದರು.
ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷರಾದ ಶ್ರೀನಿವಾಸ ಬಾಬು. ಎಲ್ ರವರು ಪ್ರಜಾಪ್ರಭುತ್ವವನ್ನು ಕಾಪಾಡುವುದು ವಕೀಲರ ಮೂಲಭೂತ ಕರ್ತವ್ಯದ ಜೊತೆಗೆ ರಾಜ್ಯದ ಸಮಸ್ತ ನಾಗರಿಕರ ಆರೋಗ್ಯವನ್ನು ಕಾಪಾಡುವುದು ಮತ್ತು ಆರೋಗ್ಯ ಕ್ಷೇತ್ರಕ್ಕೆ ಸಂಬಂಧಪಟ್ಟ ಮಾಹಿತಿಯನ್ನು ಪ್ರಸರಿಸುವ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯಾದಂತ ಎಲ್ಲಾ ವಕೀಲರ ಭಾಂದವರು ನೆರವೇರಿಸುತ್ತಾರೆ ಎಂಬ ಭರವಸೆಯನ್ನು ನೀಡಿದರು. ರಾಜ್ಯದಲ್ಲಿರುವ ಎಲ್ಲಾ ವಕೀಲರ ಸಂಘಗಳಲ್ಲಿ ಹೆಲ್ತ್ ಸೆಂಟರ್‍ಗಳನ್ನು ಮತ್ತು ಜನೌಷಧ ಕೇಂದ್ರಗಳನ್ನು ಆದ್ಯತೆ ಮೇರೆಗೆ ಸ್ಥಾಪಿಸಬೇಕೆಂದು ವಿನಂತಿಸಿದರು.
ಈ ಉಚಿತ ಲಸಿಕೆ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ವಕೀಲರ ಸಂಘಗಳಲ್ಲಿ ಚಾಲನೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಸದಸ್ಯರಾದ ಎಸ್. ಎಸ್. ಮಿಟ್ಟಲಕೋಡ್, ವಿಶಾಲ್‍ರಘು. ಹೆಚ್.ಎಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

0 Comments