ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಇಂದು 49 ನೇ ಹುಟ್ಟುಹಬ್ಬದ ಸಂಭ್ರಮ. ಇನ್ನು ಹುಟ್ಟು ಹಬ್ಬ ಆಚರಣೆ ಮಾಡಿಕೊಳ್ಳುತ್ತಿರುವ ತಮ್ಮ ನಾಯಕನಿಗೆ ಮೂಲೆ ಮೂಲೆಯಿಂದ ಅಭಿಮಾನಿಗಳು ತುಂಬು ಹೃದಯದಿಂದ ಹಾರೈಸುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ರಾಹುಲ್ ಗಾಂಧಿಗೆ ಟ್ವೀಟ್ ಮೂಲಕ ಶುಭಾಶಯ ಕೋರಿ, ಹಾರೈಸಿದ್ದಾರೆ. ದೇವರು ತಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯಸ್ಸು ನೀಡಲಿ ಎಂದು ಟ್ವೀಟ್ ಮೂಲಕ ಅನೇಕರು ಪ್ರಾರ್ಥಿಸಿದ್ದಾರೆ.
ಇನ್ನು ಕಾಂಗ್ರೆಸ್ ಕೂಡ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ರಾಹುಲ್ ಗಾಂಧಿಗೆ ಶುಭಾಶಯ ತಿಳಿಸಿದ್ದು, ರಾಹುಲ್ ಗಾಂಧಿ ಭಾಷಣಮಾಡಿರುವ 5 ಪ್ರಮುಖ ಕ್ಷಣಗಳು ಇರುವಂತಹ ವಿಡಿಯೋ ಸಂಕಲವನ್ನು ಟ್ವೀಟ್ ಮಾಡಿದೆ. ಇತ್ತ ಕಾಂಗ್ರೆಸ್ ನಾಯಕರು, ಮುಖಂಡರು ಶುಭಾಶಯದ ಜೊತೆಗೆ ರಾಹುಲ್ ಗಾಂಧಿ ಹೆಸರಲ್ಲಿ ವಿಶೇಷ ಸೇವೆಗಳನ್ನು ಮಾಡುತ್ತಿದ್ದಾರೆ.

0 Comments