ಕರ್ನಾಟಕದಲ್ಲಿ ಒಂದೇ ದಿನ ಕಳೆದ 24 ಗಂಟೆಗಳಲ್ಲಿ 7345 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೊನಾವೈರಸ್ ಹೊಸ ಪ್ರಕರಣಕ್ಕಿಂತ ಗುಣಮುಖರ ಸಂಖ್ಯೆ ಹೆಚ್ಚಾಗಿದೆ. ಒಂದು ದಿನದಲ್ಲಿ 17913 ಸೋಂಕಿತರು ಗುಣಮುಖರಾಗಿದ್ದು, ಇದೇ ಅವಧಿಯಲ್ಲಿ 148 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.
ಬುಧವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2784355ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ 33296 ಜನರು ಪ್ರಾಣ ಬಿಟ್ಟಿದ್ದು, ಈವರೆಗೂ 2599472 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ 151566 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಿಲಿಕಾನ್ ಸಿಟಿಯಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಮತ್ತೊಮ್ಮೆ 1,600ರ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 1611 ಮಂದಿಗೆ ಕೊವಿಡ್-19 ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1200754ಕ್ಕೆ ಏರಿಕೆಯಾಗಿದೆ. 16 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15354ಕ್ಕೆ ಏರಿಕೆಯಾಗಿದೆ.

0 Comments