Ticker

6/recent/ticker-posts

Ad Code

Responsive Advertisement

HD KUMARASWAMY : ವಿಧಾನಸಭೆ ವಿಶೇಷ ಅಧಿವೇಶನ ಕರೆಯಿರಿ: ಹೆಚ್‌ಡಿಕೆ


 ಬೆಂಗಳೂರು: ಕನ್ನಡ, ಕನ್ನಡಿಗ, ಕರ್ನಾಟಕ ವಿಚಾರದಲ್ಲಿ ಆಗುತ್ತಿರುವ ಹಿನ್ನಡೆ ಕುರಿತು ಚರ್ಚಿಸಲು ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಬೇಕು. ಕೇಂದ್ರ ಸರ್ಕಾರದ ನೂತನ ಶಿಕ್ಷಣ ನೀತಿಯಡಿ ಕನ್ನಡ ಭಾಷಾ ಕಲಿಕೆಯ ಬಗ್ಗೆ ಚರ್ಚೆಯಾಗಬೇಕೆಂದು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.  

ಈ ಕುರಿತು ರಾಜ್ಯಪಾಲರು, ಮುಖ್ಯಮಂತ್ರಿ ಮತ್ತು ವಿಧಾನಸಭಾಧ್ಯಕ್ಷರಿಗೆ ಸುದೀರ್ಘ ಪತ್ರ ಬರೆದಿರುವ ಅವರು, ರಾಜ್ಯದ ಕೋವಿಡ್ ಸ್ಥಿತಿಗತಿ, ಈ ಸಂದರ್ಭದಲ್ಲಿ ಸರ್ಕಾರದ ಪ್ಯಾಕೇಜ್ ಜನರಿಗೆ ಹೇಗೆ ತಲುಪುತ್ತಿದೆ ಎಂಬ ಬಗ್ಗೆ ಕೂಡ ಚರ್ಚೆಯಾಗಬೇಕು. ಸರ್ಕಾರದ ಮೇಲೆ ಗಂಭೀರವಾದ ಭ್ರಷ್ಟಾಚಾರ ಆರೋಪ ಕೂಡ ಕೇಳಿಬರುತ್ತಿದೆ. ಇದರಲ್ಲಿ ಮುಖ್ಯಮಂತ್ರಿಗಳ ಕುಟುಂಬಸ್ಥರ ಕೈವಾಡವಿದೆ ಎಂದು ಕೂಡ ಕೇಳಿಬರುತ್ತಿದೆ. ಈ ಬಗ್ಗೆ ತನಿಖೆಯಾಗಬೇಕು. ವಿಶೇಷ ಅಧಿವೇಶನ ಕರೆದು ಚರ್ಚೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

Post a Comment

0 Comments

Ad Code

Responsive Advertisement