ಬೆಂಗಳೂರು: “ಸುಧರ್ಮ" ಸಂಸ್ಕøತ ಪತ್ರಿಕೆಯ ಸಂಪಾದಕರು ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರೂ ಆದ ಶ್ರೀ ಕೆ.ವಿ. ಸಂಪತ್ ಕುಮಾರ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ಶ್ರೀ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಮೈಸೂರಿನಿಂದ ಪ್ರಕಾಶನಗೊಳ್ಳುವ ದೇಶದ ಏಕೈಕ ಸಂಸ್ಕೃತ ದೈನಿಕ - ಸುಧರ್ಮ ಪತ್ರಿಕೆಯ ಸಂಪಾದಕರಾದ ಶ್ರೀ ಕೆ.ವಿ. ಸಂಪತ್ ಕುಮಾರ್ ಅವರು ನಿಧನರಾಗಿದ್ದಾರೆ. 2020ರಲ್ಲಿ ಸಂಪತ್ ಕುಮಾರ್ ಹಾಗೂ ಅವರ ಪತ್ನಿ ಶ್ರೀಮತಿ ಕೆ.ಎಸ್.ಜಯಲಕ್ಷ್ಮಿ ಅವರು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು ಎಂದು ತಿಳಿಸಿದ್ದಾರೆ. ಮೃತರÀ ಕುಟುಂಬಕ್ಕೆ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಶ್ರೀ ನಳಿನ್‍ಕುಮಾರ್ ಕಟೀಲ್ ಅವರು ಪ್ರಾರ್ಥಿಸಿದ್ದಾರೆ.

0 Comments